ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Vivo Y75: ವಿವೊ ನೂತನ ಸ್ಮಾರ್ಟ್‌ಫೋನ್ ದರ ₹1,000 ಇಳಿಕೆ

ವಿವೊ ಹೊಸದಾಗಿ ಬಿಡುಗಡೆ ಮಾಡಿರುವ ಸ್ಮಾರ್ಟ್‌ಫೋನ್ ಬೆಲೆ ಇಳಿಕೆ
Last Updated 22 ಡಿಸೆಂಬರ್ 2022, 15:53 IST
ಅಕ್ಷರ ಗಾತ್ರ

ಬೆಂಗಳೂರು: ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೆಸರು ಮಾಡಿರುವ ಚೀನಾ ಮೂಲದ ವಿವೊ ಕಂಪನಿ, ಭಾರತದಲ್ಲಿ ಬಿಡುಗಡೆ ಮಾಡಿರುವ ಹೊಸ ಸ್ಮಾರ್ಟ್‌ಫೋನ್ ಒಂದರ ಬೆಲೆಯಲ್ಲಿ ಇಳಿಕೆ ಮಾಡಿದೆ.

ವಿವೊ ವೈ ಸರಣಿಯಲ್ಲಿ ಮಾರುಕಟ್ಟೆಗೆ ಪರಿಚಯಿಸಿದ್ದ Y75 ಸ್ಮಾರ್ಟ್‌ಫೋನ್ ಬೆಲೆಯಲ್ಲಿ ₹1,000 ಇಳಿಕೆ ಮಾಡಿದೆ.

ಈ ಸ್ಮಾರ್ಟ್‌ಫೋನ್ 8GB + 128GB ಮಾದರಿಗೆ ₹20,999 ದರದಲ್ಲಿ ಬಿಡುಗಡೆಯಾಗಿತ್ತು. ದರ ಇಳಿಕೆ ಬಳಿಕ ₹19,999ಕ್ಕೆ ಲಭ್ಯವಾಗಲಿದೆ ಎಂದು ಕಂಪನಿ ಹೇಳಿದೆ.

ವಿವೊ Y75
6.44 ಇಂಚಿನ ಫುಲ್‌ಎಚ್‌ಡಿ+ ಡಿಸ್‌ಪ್ಲೇ, ಮೀಡಿಯಾಟೆಕ್ ಹೀಲಿಯೊ G96 4G ಪ್ರೊಸೆಸರ್ ಹೊಂದಿದೆ.

ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಜತೆಗೆ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಕ್ಯಾಮೆರಾ ಮತ್ತು 2 ಮೆಗಾಪಿಕ್ಸೆಲ್ ಮ್ಯಾಕ್ರೊ ಸೆನ್ಸರ್ ಇದೆ. ಜತೆಗೆ 44 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಇದರ ವಿಶೇಷತೆಯಾಗಿದೆ. 4,050mAh ಬ್ಯಾಟರಿ ಹಾಗೂ 44W ಫಾಸ್ಟ್ ಚಾರ್ಜಿಂಗ್ ವಿವೊ ಫೋನ್‌ನಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT