ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Xiaomi 13: ನೂತನ ಸ್ಮಾರ್ಟ್‌ಫೋನ್ ಪರಿಚಯಿಸಿದ ಶಓಮಿ

ಶಓಮಿ 13 ಸರಣಿಯ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಲಗ್ಗೆ
Published : 13 ಡಿಸೆಂಬರ್ 2022, 10:36 IST
ಫಾಲೋ ಮಾಡಿ
Comments

ಬೆಂಗಳೂರು: ಚೀನಾ ಮೂಲದ ಟೆಕ್ ಮತ್ತು ಗ್ಯಾಜೆಟ್ ಕಂಪನಿ ಶಓಮಿ, ಜಾಗತಿಕ ಮಾರುಕಟ್ಟೆಗೆ ನೂತನ ಸ್ಮಾರ್ಟ್‌ಫೋನ್ ಪರಿಚಯಿಸಿದೆ.

ಶಓಮಿ 13 ಮತ್ತು ಶಓಮಿ 13 ಪ್ರೊ ಆವೃತ್ತಿಯನ್ನು ಕಂಪನಿ ಪರಿಚಯಿಸಿದೆ.

ಶಓಮಿ 13 ಪ್ರೊ
ನೂತನ ಶಓಮಿ 13 ಪ್ರೊ ಮಾದರಿಯಲ್ಲಿ 6.73 ಇಂಚಿನ ಕ್ವಾಡ್ ಎಚ್‌ಡಿ+ ಡಿಸ್‌ಪ್ಲೇ, ಕ್ವಾಲ್ಕಂ ಸ್ನ್ಯಾಪ್‌ಡ್ರ್ಯಾಗನ್ 8 ಜೆನ್. 2 ಪ್ರೊಸೆಸರ್ ಮತ್ತು ಅಡ್ರೆನೊ 740 ಗ್ರಾಫಿಕ್ಸ್ ಬೆಂಬಲ ಹೊಂದಿದೆ. ಆ್ಯಂಡ್ರಾಯ್ಡ್ 13 ಆಧಾರಿತ ಎಂಐಯುಐ 14 ಓಎಸ್ ಹೊಂದಿದೆ. 8GB / 12GB LPPDDR5x 8533 Mbps RAM ಮತ್ತು 128GB / 256GB / 512GB ಎಂಬ ಮೂರು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. 4820mAh ಬ್ಯಾಟರಿ ಜತೆಗೆ 120W ಫಾಸ್ಟ್ ಚಾರ್ಜಿಂಗ್ ಬೆಂಬಲ ಹೊಂದಿದೆ ಎಂದು ಕಂಪನಿ ಹೇಳಿದೆ.

ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ+ 50 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಹಾಗೂ 50 ಮೆಗಾಪಿಕ್ಸೆಲ್ ಟೆಲಿಫೋಟೊ ಲೆನ್ಸ್ ಜತೆಗೆ 32 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಬೆಲೆ (ಅಂದಾಜು) ₹59,209 ಇರಲಿದೆ.

ಶಓಮಿ 13
6.36 ಇಂಚಿನ ಎಚ್‌ಡಿ+ ಡಿಸ್‌ಪ್ಲೇ, ಸ್ನ್ಯಾಪ್‌ಡ್ರ್ಯಾಗನ್ 8 ಜೆನ್. 2 ಪ್ರೊಸೆಸರ್ ಮತ್ತು ಅಡ್ರೆನೊ 740 ಗ್ರಾಫಿಕ್ಸ್, ಆ್ಯಂಡ್ರಾಯ್ಡ್ 13 ಆಧಾರಿತ ಎಂಐಯುಐ 14 ಓಎಸ್ ಹಾಗೂ 8GB / 12GB LPPDDR5x 8530 Mbps RAM ಮತ್ತು 128GB / 256GB / 512GB ಎಂಬ ಮೂರು ಸ್ಟೋರೇಜ್ ಆಯ್ಕೆಯಲ್ಲಿ ಲಭ್ಯವಾಗಲಿದೆ. 4500mAh ಬ್ಯಾಟರಿ ಜತೆಗೆ 67W ಫಾಸ್ಟ್ ಚಾರ್ಜಿಂಗ್ ಬೆಂಬಲ ಇರಲಿದೆ ಎಂದು ಕಂಪನಿ ತಿಳಿಸಿದೆ.

ಹಿಂಭಾಗದಲ್ಲಿ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಜತೆಗೆ 10 ಮೆಗಾಪಿಕ್ಸೆಲ್ ಟೆಲಿಫೋಟೊ ಕ್ಯಾಮೆರಾ ಮತ್ತು 32 ಮೆಗಾಪಿಕ್ಸೆಲ್ ಸೆಲ್ಫಿ ಇದರಲ್ಲಿದೆ ಎಂದು ಶಓಮಿ ತಿಳಿಸಿದೆ.

ಬೆಲೆ (ಅಂದಾಜು) ₹47,365 ಇರಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT