ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Facebook, Instagram ತಾಂತ್ರಿಕ ಸಮಸ್ಯೆ ಪರಿಹಾರ: ಮೆಟಾ ವಕ್ತಾರ ಆ್ಯಂಡಿ ಸ್ಟೋನ್

Published 5 ಮಾರ್ಚ್ 2024, 18:00 IST
Last Updated 5 ಮಾರ್ಚ್ 2024, 18:00 IST
ಅಕ್ಷರ ಗಾತ್ರ

ಬೆಂಗಳೂರು: ಮೆಟಾ ಒಡೆತನದ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಎದುರಿಸುತ್ತಿದ್ದ ಲಾಗಿನ್ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾದ ವಕ್ತಾರ ಆ್ಯಂಡಿ ಸ್ಟೋನ್ ಅವರು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ, ‘ತಾಂತ್ರಿಕ ಸಮಸ್ಯೆಯಿಂದಾಗಿ ಜನರು ತೊಂದರೆ ಅನುಭವಿಸಿದರು. ನಾವು ಸಾಧ್ಯವಾದಷ್ಟು ಬೇಗ ಪ್ರತಿಯೊಬ್ಬರ ಸಮಸ್ಯೆಯನ್ನು ಪರಿಹರಿಸಿದ್ದೇವೆ, ಅನಾನುಕೂಲತೆಗಾಗಿ ನಾವು ಕ್ಷಮೆಯಾಚಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

ಬಳಕೆದಾರರ ಫೇಸ್‌ಬುಕ್‌ ಖಾತೆಗಳು ಇದ್ದಕ್ಕಿದ್ದಂತೆ ಲಾಗೌಟ್ ಆಗಿದ್ದವು. ನಂತರ ಲಾಗಿನ್ ಆಗಲು ಸಾಧ್ಯವಾಗದೆ, ಬಳಕೆದಾರರು ಪರದಾಡಿದರು. ಪಾಸ್‌ವರ್ಡ್‌ ಸರಿಯಾಗಿಲ್ಲ ಎಂಬ ಸಂದೇಶ ಬರುತ್ತಲೇ ಇತ್ತು ಎಂದು ಬಳಕೆದಾರರು ತಾವು ಎದುರಿಸಿದ ಸಮಸ್ಯೆಯನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.

ಈ ಕುರಿತಂತೆ #facebookdown ಹಾಗೂ #instagramdown ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT