ಸೂರ್ಯನತ್ತ ಇಸ್ರೊ...
ಸೆಪ್ಟೆಂಬರ್ 02ರಂದು ಶ್ರೀಹರಿಕೋಟದ ಉಡಾವಣಾ ಕೇಂದ್ರದಿಂದ 'ಆದಿತ್ಯ–ಎಲ್ 1' ಬಾಹ್ಯಾಕಾಶ ನೌಕೆ ಹೊತ್ತ ಪಿಎಸ್‌ಎಲ್‌ವಿ–ಸಿ 57 ರಾಕೆಟ್ ನಭಕ್ಕೆ ಚಿಮ್ಮಿತ್ತು. ಸೂರ್ಯನ ಅಧ್ಯಯನಕ್ಕಾಗಿ ಭಾರತ ನಡೆಸಿದ ಚೊಚ್ಚಲ ಯೋಜನೆ ಇದಾಗಿದೆ.
ಆದಿತ್ಯ ಎಲ್ 1 ಅನ್ನು ಸಂಪೂರ್ಣ ದೇಶೀಯವಾಗಿ ನಿರ್ಮಿಸಲಾಗಿದ್ದು, ಒಟ್ಟು ಏಳು ಉಪಕರಣಗಳು ಇರಲಿವೆ. ಭೂಮಿಯಿಂದ 15 ಲಕ್ಷ ಕಿ.ಮೀ ದೂರದಲ್ಲಿರುವ ಲಗ್ರಾಂಜಿಯನ್ ಬಿಂದುವಿನಲ್ಲಿ ಆದಿತ್ಯ ಎಲ್–1 ಅಂತರಿಕ್ಷ ವೀಕ್ಷಣಾಲಯವನ್ನುಇರಿಸಲಾಗುತ್ತದೆ. ಲಗ್ರಾಂಜಿಯನ್ ಬಿಂದು ಸೇರಲು 125 ದಿನ ಬೇಕಾಗುತ್ತದೆ. ಇದು ಯಾವುದೇ ಅಡಚಣೆ ಇಲ್ಲದೆ ನಿರಂತರವಾಗಿ ಸೂರ್ಯನಲ್ಲಿ ನಡೆಯುವ ಸೌರ ಚಟುವಟಿಕೆಗಳನ್ನು ಗಮನಿಸುತ್ತದೆ.
ನಾಲ್ಕು ಪ್ರತ್ಯೇಕ ಉಪಕರಣಗಳಿಂದ ಸೂರ್ಯನ ಪ್ರಭಾಗೋಳ, ವರ್ಣಗೋಳ ಮತ್ತು ಕಿರೀಟದ ಅಧ್ಯಯನವನ್ನು ನಿರಂತರವಾಗಿ ನಡೆಸಲಿದೆ. ಉಳಿದ ಮೂರು ಉಪಕರಣಗಳು ಅಯಸ್ಕಾಂತ ಕ್ಷೇತ್ರ ಮತ್ತು ಕಣ ಪ್ರವಾಹದ ವೀಕ್ಷಣೆ ನಡೆಸುತ್ತವೆ.