ಅರಕಲಗೂಡು: ‘ನೇಕಾರ ಸಮುದಾಯವು ಸರ್ಕಾರದ ಮೀಸಲಾತಿ ಹಾಗೂ ಲಭ್ಯವಿರುವ ಆರ್ಥಿಕ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ತಹಶೀಲ್ದಾರ್ ಸೌಮ್ಯ ತಿಳಿಸಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸೋಮವಾರ ಏರ್ಪಡಿಸಿದ್ದ ಆದ್ಯ ವಚನಕಾರ ದೇವರ ದಾಸಿಮಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ನೇಕಾರ ಸಮುದಾಯಗಳ ಏಳಿಗೆಗಾಗಿ ರಾಜ್ಯ ಸರ್ಕಾರ ನೇಕಾರರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದ್ದು, ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯಡಿಯಲ್ಲಿ ನೇಕಾರರಿಗೆ ಹಲವು ಸವಲತ್ತುಗಳು ಲಭ್ಯವಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು. ಸಮಾಜದ ಪ್ರಗತಿಗೆ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆ ಅತ್ಯವಶ್ಯಕವಾಗಿದ್ದು, ಈ ಮೂರೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವುದು ಅಗತ್ಯ’ ಎಂದರು.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ. ಎ. ನಂಜುಂಡಸ್ವಾಮಿ ಮಾತನಾಡಿ, ‘ದಾಸಿಮಯ್ಯನವರು 11ನೇ ಶತಮಾನದಲ್ಲೇ ವಚನ ಸಾಹಿತ್ಯಕ್ಕೆ ಭದ್ರ ಬುನಾದಿ ಹಾಕಿದ ಆದ್ಯ ವಚನಕಾರರಾಗಿದ್ದಾರೆ. ಅವರ ವಚನಗಳು 12ನೇ ಶತಮಾನದ ಬಸವಣ್ಣನವರ ಕಾಲದ ವಚನ ಚಳುವಳಿಗೆ ಪ್ರೇರಣೆ ನೀಡಿದವು’ ಎಂದು ಸ್ಮರಿಸಿದರು.

ಉಪನ್ಯಾಸ ನೀಡಿದ ಆಲೂರಿನ ಉಪನ್ಯಾಸಕ ಶಿವಕುಮಾರ್, ‘ದಾಸಿಮಯ್ಯ ಅವರು ತಮ್ಮ ವಚನಗಳ ಮೂಲಕ ಸಮಾಜದಲ್ಲಿದ್ದ ಮೂಢನಂಬಿಕೆ, ಜಾತಿಯತೆ, ಸ್ತ್ರೀ-ಪುರುಷ ಅಸಮಾನತೆ ಮತ್ತು ಡಾಂಬಿಕ ಭಕ್ತಿಯನ್ನು ತೀವ್ರವಾಗಿ ಖಂಡಿಸಿದರು. ವಚನ ಚಳುವಳಿಯ ಮೂಲಕ ಸಾಮಾಜಿಕ ಹಾಗೂ ಧಾರ್ಮಿಕ ಸುಧಾರಣೆಗೆ ಅವರು ನೀಡಿದ ಕೊಡುಗೆ ಇಂದಿಗೂ ಪ್ರಸ್ತುತ’ ಎಂದರು.

ಮುಖಂಡರಾದ ಪಾಂಡು ವಿಠ್ಠಲ ಶೆಟ್ಟಿ, ರಾಮಕೃಷ್ಣ, ಬನಶಂಕರಿ ನೇಕಾರ ಸಹಕಾರ ಸಂಘದ ಕಾರ್ಯದರ್ಶಿ ಶಿವಕುಮಾರ್, ನೇಕಾರ ಸಮಾಜದ ಮುಖಂಡರು, ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260324-36-2120964573

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.