ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷುದ್ರಗ್ರಹ ಪರಿಣಾಮ ಪತ್ತೆಗೆ ಕಾರ್ಯಾಚರಣೆ

Last Updated 26 ಏಪ್ರಿಲ್ 2019, 20:11 IST
ಅಕ್ಷರ ಗಾತ್ರ

‌ವಾಷಿಂಗ್ಟನ್‌ (ಪಿಟಿಐ):ಕ್ಷುದ್ರಗ್ರಹಗಳಿಂದ ಭೂಮಿಯ ಮೇಲಾಗುವ ಪರಿಣಾಮಗಳ ಅಧ್ಯಯನ ನಡೆಸುವ ಉದ್ದೇಶದಿಂದ ಅಣಕು ಕಾರ್ಯಾಚರಣೆ ನಡೆಸಲು ಸಜ್ಜಾಗಿದೆ. ಅಂತರರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆಗಳ ಜೊತೆಗೂಡಿ ನಾಸಾ ಈ ಕಾರ್ಯಾಚರಣೆ ನಡೆಸಲಿದೆ.

ಭವಿಷ್ಯದಲ್ಲಿ ಸಂಭವಿಸುವ ವಿಕೋಪಗಳು ಮತ್ತು ಇಂತಹ ಸಂಭವನೀಯ ಅಪಾಯಗಳಿಂದ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅಧ್ಯಯನ ನಡೆಸಲು ಈ ಕಾರ್ಯಾಚರಣೆಯಿಂದ ಅನುಕೂಲವಾಗುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ಭೂಮಿಯ ಹತ್ತಿರದಲ್ಲಿರುವ ಆಕಾಶಕಾಯಗಳಾದ ಕ್ಷುದ್ರಗ್ರಹ ಅಥವಾ ಧೂಮಕೇತುಗಳಿಂದ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಈ ಕಾರ್ಯಾಚರಣೆ ಬೆಳಕು ಚೆಲ್ಲಲಿದೆ. ಪ್ರಾಕೃತಿಕ ವಿಕೋಪಗಳು ಸಂಭವಿಸುವ ವೇಳೆ ತೆಗೆದುಕೊಳ್ಳಬೇಕಾದ ಕ್ರಮ
ಗಳನ್ನು ಆಧಾರವಾಗಿಟ್ಟುಕೊಂಡು ಈ ಕಾರ್ಯಾಚರಣೆ ರೂಪು–ರೇಷೆಗಳನ್ನು ರೂಪಿಸಲಾಗಿದೆ ಎಂದು ನಾಸಾ ಹೇಳಿದೆ.

ಈ ನಿಟ್ಟಿನಲ್ಲಿ, ನಾಸಾವು ಮುಂದಿನ ವಾರ ‘ಗ್ರಹಗಳ ರಕ್ಷಣಾ ಸಮಾವೇಶ–2019’ ಆಯೋಜಿಸಲಿದೆ. ವಿಶ್ವದ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಗಳು ಇದರಲ್ಲಿ ಪಾಲ್ಗೊಳ್ಳಲಿದ್ದು, ಕಾರ್ಯಾಚರಣೆಯ ಸ್ವರೂಪದ ಬಗ್ಗೆ ಚರ್ಚೆ ನಡೆಸಲಿವೆ.

‘ವಿಶ್ವದ ಬಾಹ್ಯಾಕಾಶ ಸಂಸ್ಥೆಗಳ ನಡುವೆ ಪರಿಣಾಮಕಾರಿ ಸಂವಹನ ನಡೆಸಲು ಈ ಸಮಾವೇಶ ವೇದಿಕೆಯಾಗಲಿದ್ದು, ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ತೆಗೆದುಕೊಳ್ಳುವ ಕ್ರಮಗಳ ಕುರಿತು ಚರ್ಚಿಸಲಿದ್ದಾರೆ’ ಎಂದು ವಿಜ್ಞಾನಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT