ಬಾಹ್ಯಾಕಾಶ ಕೇಂದ್ರದ ಎರಡನೇ ಉಡಾವಣಾ ನೆಲೆಯಿಂದ ಬೆಳಿಗ್ಗೆ 10.42ರ ಸಮಯದಲ್ಲಿ 51.7 ಮೀಟರ್ ಎತ್ತರದ ರಾಕೆಟ್ ಆಕಾಶಕ್ಕೆ ಚಿಮ್ಮಿತು.
ಭಾರತೀಯ ಪ್ರಾದೇಶಿಕ ಪಥದರ್ಶಕ ಉಪಗ್ರಹ ವ್ಯವಸ್ಥೆ–ನಾವಿಕ್ (NavIC)ನ ಸೇವೆಗಳ ನಿರಂತರತೆಯನ್ನು ಖಾತ್ರಿಪಡಿಸುವ ವಿಷಯದಲ್ಲಿ ಎರಡನೇ ತಲೆಮಾರಿನ ಈ ಉಪಗ್ರಹದ ಉಡಾವಣೆಯು ಅತ್ಯಂತ ಮಹತ್ವದ್ದು ಎನಿಸಿಕೊಂಡಿದೆ. ದೇಶದಲ್ಲಿ ನಿಖರವಾದ ಮತ್ತು ನೈಜ ಪಥದರ್ಶಕ ಮಾಹಿತಿಯನ್ನು ಈ ಉಪಗ್ರಹಗಳು ಒದಗಿಸಲಿದೆ ಎಂದು ಇಸ್ರೊ ಹೇಳಿದೆ.