ಬೆಂಗಳೂರು: ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಮಾಡಿದ ವಿಕ್ರಮ್ ಲ್ಯಾಂಡರ್‌ನ ಚಿತ್ರವನ್ನು ರೋವರ್ ಪ್ರಜ್ಞಾನ್ ಬುಧವಾರ ಸೆರೆ ಹಿಡಿದಿದೆ.
ಈ ಚಿತ್ರವನ್ನು ಇಸ್ರೊ ಸಾಮಾಜಿಕ ಜಾಲತಾಣ ‘ಎಕ್ಸ್‘ನಲ್ಲಿ ಹಂಚಿಕೊಂಡಿದೆ.
ಪ್ರಜ್ಞಾನ್‌ನಲ್ಲಿ ಅಳವಡಿಸಿರುವ ಕ್ಯಾಮೆರಾದಿಂದ ಈ ಚಿತ್ರವನ್ನು ಸೆರೆಹಿಡಿಯಲಾಗಿದೆ ಎಂದು ಇಸ್ರೊ ಹೇಳಿದೆ.
Chandrayaan-3 Mission:
— ISRO (@isro) August 30, 2023
Smile, please📸!
Pragyan Rover clicked an image of Vikram Lander this morning.
The 'image of the mission' was taken by the Navigation Camera onboard the Rover (NavCam).
NavCams for the Chandrayaan-3 Mission are developed by the Laboratory for… pic.twitter.com/Oece2bi6zE
ದಕ್ಷಿಣ ಧ್ರುವದಲ್ಲಿ ಮೇಲ್ಮೈಯಲ್ಲಿ ಈಗಾಗಲೇ ಆಮ್ಲಜನಕ ಧಾತುವನ್ನು ಪತ್ತೆಹಚ್ಚಲಾಗಿದೆ. ಸದ್ಯ ಈಗ ಜಲಜನಕದ ಹುಡುಕಾಟ ನಡೆದಿದೆ. ಜಲಜನಕ ದೊರೆತರೆ ಚಂದ್ರನ ಮೇಲೆ ನೀರಿನ ಉಪಸ್ಥಿತಿಯು ತಿಳಿಯುತ್ತದೆ ಎಂದು ಇಸ್ರೊ ಹೇಳಿದೆ.
ಪ್ರಜ್ಞಾನ್‌ನಲ್ಲಿರುವ ಲಿಬ್ಸ್ (ಲೇಸರ್ ಇಂಡ್ಯೂಸ್ಡ್ ಬ್ರೇಕ್‌ಡೌನ್ ಸ್ಪೆಕ್ಟ್ರೊಸ್ಕೋಪ್) ಉಪಕರಣವು ನಿರೀಕ್ಷೆಯಂತೆ ಅಲ್ಯುಮಿನಿಯಂ(ಎಎಲ್), ಕ್ಯಾಲ್ಷಿಯಂ,ಕಬ್ಬಿಣ, ಕ್ರೋಮಿಯಂ, ಟೈಟೆನಿಯಂ, ಮ್ಯಾಂಗನೀಸ್, ಸಿಲಿಕಾನ್ ಧಾತುಗಳನ್ನು ಪತ್ತೆ ಮಾಡಿದೆ. ಈ ಲಿಬ್ಸ್ ಉಪಕರಣವನ್ನು ಬೆಂಗಳೂರಿನ ಎಲೆಕ್ಟ್ರೊ– ಆಪ್ಟಿಕ್ಸ್ ಸಿಸ್ಟಮ್ ಪ್ರಯೋಗಾಲಯ ಅಭಿವೃದ್ಧಿಪಡಿಸಿತ್ತು.
ಚಂದ್ರನ ದಕ್ಷಿಣ ಧ್ರುವದಲ್ಲಿ ರೋವರ್ ಇಳಿದು ಬುಧವಾರಕ್ಕೆ ಒಂದು ವಾರ ತುಂಬಲಿದೆ. ಇನ್ನು ಏಳು ದಿನಗಳ ಕಾಲ ಪ್ರಯೋಗ ಮುಂದುವರಿಸಲಿದೆ. ಅಂದರೆ ಸೆ. 5 ರವೇಳೆಗೆ ಚಂದ್ರನಲ್ಲಿ ಕತ್ತಲು ಆವರಿಸಲಿದೆ. ಅಲ್ಲಿ ಇನ್ನು ಬೆಳಕು ಕಾಣಲು ಮುಂದಿನ 14 ದಿನಗಳು ಕಾಯಬೇಕು. ಆ ಬಳಿಕ ಮತ್ತೆ ಲ್ಯಾಂಡರ್ ಮತ್ತು ರೋವರ್‌ಗಳಿಗೆ ಮರು ಜೀವ ನೀಡಲು ಸಾಧ್ಯವೇ ಎಂಬುದನ್ನು ಇಸ್ರೊ ಪ್ರಯತ್ನ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಭಾರತ ಚಂದ್ರನನ್ನು ತಲುಪಿದ ನಾಲ್ಕನೇ ದೇಶ ಮತ್ತು ದಕ್ಷಿಣ ಧ್ರುವವನ್ನು ತಲುಪಿದ ಮೊದಲ ದೇಶವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.