ಕಲಬುರಗಿ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆ ಅತ್ಯವಶ್ಯಕ. ಆದರೆ, ಅದನ್ನು ಹಂಸಪಕ್ಷಿ ನೀರು ಹಾಗೂ ಹಾಲನ್ನು ಬೇರ್ಪಡಿಸಿದಂತೆ ಔಚಿತ್ಯ ಅರಿತು ಬಳಸಬೇಕು’ ಎಂದು ಗುವಿವಿ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಶಿವಾನಂದ ಎಸ್.ರುಮ್ಮಾ ಅವರು ಹೇಳಿದರು.

ನಗರದ ನೂತನ ಪದವಿ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಭೌತಿಕ ಮತ್ತು ಜೀವ ವಿಜ್ಞಾನಗಳಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಅದರ ಅನ್ವಯಗಳು’ ವಿಷಯ ಕುರಿತ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

‘ಕೃತಕ ಬುದ್ಧಿಮತ್ತೆಯು ಇಂದಿನ ಅಗತ್ಯತೆಗಳನ್ನು ಪೂರೈಸುವ ಸಾಧನವಾಗಿದೆ. ಇದನ್ನು ಬಹು ಜಾಗರೂಕತೆ ಹಾಗೂ ಎಚ್ಚರಿಕೆಯಿಂದ ಬಳಸಬೇಕು’ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ನೂತನ ವಿದ್ಯಾಲಯ ಸಂಸ್ಥೆಯ ಶೈಕ್ಷಣಿಕ ಮಂಡಳಿ ಅಧ್ಯಕ್ಷೆ ಮೀನಾ ಪತ್ಕಿ ದೇಶಪಾಂಡೆ ಮಾತನಾಡಿ, ‘ಕೃತಕ ಬುದ್ಧಿಮತ್ತೆಯ ಕುರಿತು ಸಮಾಜದಲ್ಲಿ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಅದು ಮನುಕುಲಕ್ಕೆ ಬಹುಪಯೋಗಿಯಾಗಿದೆ’ ಎಂದು ಹೇಳಿದರು.

‘ಭೌತಿಕ ವಿಜ್ಞಾನಗಳಲ್ಲಿ ಕೃತಕ ಬುದ್ಧಿಮತ್ತೆ’ ವಿಷಯದ ಕುರಿತು ನಿವೃತ್ತ ಪ್ರಾಚಾರ್ಯ ಮಲ್ಲಿಕಾರ್ಜುನ ಹಂಗಾರ್ಗೆ ಮಾತನಾಡಿ, ‘ಕೃತಕ ಬುದ್ಧಿಮತ್ತೆಯ ತಯಾರಕರಾದ ನಾವು, ಅದನ್ನು ಹೇಗೆ ಬಳಸಿಕೊಳ್ಳುತ್ತೇವೆ ಎನ್ನುವುದರ ಮೇಲೆ ಅದರ ಉಪಯೋಗ ಅವಲಂಬಿಸಿದೆ. ಮುಂದಿನ ದಿನಗಳಲ್ಲಿ ಇದು ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಹೊಂದಿದೆ’ ಎಂದು ಹೇಳಿದರು.

ಪ್ರಾಧ್ಯಾಪಕ ಶಿವಾನಂದ ಗೋರ್ಣಾಳೆ, ಸಂಸ್ಥೆಯ ನಿರ್ದೇಶಕ ಪ್ರೊ.ಗೋವಿಂದ ಪೂಜಾರ್ ಮಾತನಾಡಿದರು. ವಿದ್ಯಾರ್ಥಿಗಳು, ಅಧ್ಯಾಪಕರು, ಸಂಶೋಧಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಿದ್ದರು. ಪ್ರಾಚಾರ್ಯ ದಯಾನಂದ ಎಂ.ಶಾಸ್ತ್ರಿ ಸ್ವಾಗತಿಸಿದರು. ವಿಷ್ಣು ಗುಂಡಗುರ್ತಿ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-34-373400266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.