ಜೇವರ್ಗಿ: ಬಸವ ಕೇಂದ್ರ ತಾಲ್ಲೂಕು ಘಟಕದ ಅಧ್ಯಕ್ಷ ಶರಣಬಸವ ಕಲ್ಲಾ ಮತ್ತು ಅವರ ಪತ್ನಿ ಶ್ರೀದೇವಿ ಕಲ್ಲಾ ಅವರಿಗೆ ವಿಯೆಟ್ನಾಂನಲ್ಲಿ ಜರುಗಿದ 2026ನೇ ಸಾಲಿನ ಇಂಡೋ-ನಾಮ್ ಸೈಂಟಿಫಿಕ್ ಸಮಿಟ್ ಫೆಲೋಶಿಪ್ ಅಂತರರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ವಿಯೆಟ್ನಾಂ ದೇಶದಲ್ಲಿ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ವತಿಯಿಂದ ನಡೆದ ಇಂಡೋ ವಿಯೆಟ್ನಾಂ ಅಂತರರಾಷ್ಟ್ರೀಯ ವೈಜ್ಞಾನಿಕ ಸಮ್ಮೇಳನದಲ್ಲಿ ಈ ಫೆಲೋಶಿಪ್ ಪ್ರದಾನ ಮಾಡಲಾಯಿತು.

ಕಲ್ಲಾ ದಂಪತಿಗಳಿಗೆ ದೊರೆತ ಈ ಪ್ರಶಸ್ತಿಯು ಜಿಲ್ಲೆಯ ಗೌರವವನ್ನು ಹೆಚ್ಚಿಸಿದೆ. ಕಲ್ಲಾ ಅವರು ಶಿಕ್ಷಣ, ಬಸವ ತತ್ವ ಪ್ರಸಾರ, ಸಮಾಜಸೇವೆ ಮತ್ತು ವಿಶೇಷವಾಗಿ ವೈಜ್ಞಾನಿಕ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಶ್ರಮಿಸುತ್ತಿದ್ದಾರೆ.

ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಶರಣಬಸವ ಕಲ್ಲಾ, ‘ಈ ಗೌರವ ನನ್ನೊಬ್ಬನ ಸಾಧನೆಯಲ್ಲ. ನನ್ನ ಕುಟುಂಬ ಹಾಗೂ ನನ್ನನ್ನು ಪ್ರೋತ್ಸಾಹಿಸಿದ ಎಲ್ಲರ ಸಹಕಾರದ ಫಲವಾಗಿದೆ. ಮುಂದಿನ ದಿನಗಳಲ್ಲಿಯೂ ಕಲೆ, ಸಂಸ್ಕೃತಿ, ಶಿಕ್ಷಣ, ವಿಜ್ಞಾನ ಜಾಗೃತಿ ಕ್ಷೇತ್ರದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಈ ಪ್ರಶಸ್ತಿ ಪ್ರೇರಣೆಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಯೆಟ್ನಾಂ ದೇಶದ ರಾಯಭಾರಿ, ಐಪಿಎಸ್ ಅಧಿಕಾರಿ ಪ್ರದೀಪ್ ಯಾದಗಿರಿ, ಶಾಂತವೀರ ಗುರುಮುರುಘ ರಾಜೇಂದ್ರ ಸ್ವಾಮೀಜಿ, ಬೀದರ್ ಮಠದ ಬಸವ ಸ್ವಾಮೀಜಿ, ದಿನೇಶ್ ಕುಮಾರ ಜೈನ್, ಶರಣಚಿಂತಕ ವಿಶ್ವರಾಧ್ಯ ಸತ್ಯಂಪೇಟೆ, ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಹುಲಿಕಲ್ ನಟರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-31-1055480814

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.