'ಆ್ಯಕ್ಸಿಯಂ–4' ಅಂತರಿಕ್ಷ ಕಾರ್ಯಕ್ರಮದ ಭಾಗವಾಗಿ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲಾ ಇಂದು (ಜೂನ್ 25) ಮಧ್ಯಾಹ್ನ 12.01ಕ್ಕೆ (ಭಾರತೀಯ ಕಾಲಮಾನ) ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದ್ದಾರೆ.
(ಪಿಟಿಐ ಚಿತ್ರ)
ADVERTISEMENT
ಶುಭಾಂಶು ಶುಕ್ಲಾ ಅಲ್ಲದೆ, ಹಂಗರಿ ಮತ್ತು ಪೋಲೆಂಡ್‌ನ ಗಗನಯಾತ್ರಿಗಳಿರುವ ಗಗನನೌಕೆಯನ್ನು ಹೊತ್ತ ಸ್ಪೇಸ್‌ಎಕ್ಸ್‌ನ 'ಫಾಲ್ಕನ್–9' ರಾಕೆಟ್ ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಿತು.
(ಪಿಟಿಐ ಚಿತ್ರ)
1984ರಲ್ಲಿ ಭಾರತದ ರಾಕೇಶ್ ಶರ್ಮಾ ರಷ್ಯಾದ ಗಗನನೌಕೆಯಲ್ಲಿ ಗಗನಯಾನ ಕೈಗೊಂಡಿದ್ದರು. ಅದಾದ 41 ವರ್ಷಗಳ ಬಳಿಕ ಶುಕ್ಲಾ ಅಂತರಿಕ್ಷಯಾನ ಕೈಗೊಂಡಿದ್ದಾರೆ.
(ರಾಯಿಟರ್ಸ್ ಚಿತ್ರ)
ನಾಸಾ, ಇಸ್ರೊ, ಆ್ಯಕ್ಸಿಯಂ ಸ್ಪೇಸ್ ಹಾಗೂ ಇಲಾನ್ ಮಸ್ಕ್ ಒಡೆತನ ಸ್ಪೇಸ್‌ಎಕ್ಸ್ ಜಂಟಿಯಾಗಿ ಈ ಬಾಹ್ಯಾಕಾಶ ಕಾರ್ಯಕ್ರಮ ರೂಪಿಸಿವೆ.
(ರಾಯಿಟರ್ಸ್ ಚಿತ್ರ)
ವಿವಿಧ ಕಾರಣಗಳಿಗಾಗಿ ಒಟ್ಟು ಆರು ಬಾರಿ ಈ ಬಾಹ್ಯಾಕಾಶ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು.
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಪ್ರಯಾಣ ಬೆಳೆಸಿರುವ ಎರಡನೇ ಭಾರತೀಯ ಎನಿಸಿರುವ ಗಗನಯಾತ್ರಿ ಶುಭಾಂಶು ಶುಕ್ಲಾ ಇದನ್ನು ಹೆಮ್ಮೆಯ ಕ್ಷಣ ಎಂದು ಬಣ್ಣಿಸಿದ್ದಾರೆ.