ಉಡುಪಿ: ‘ಕೇವಲ ಒಂದು ನಿರ್ದಿಷ್ಟ ವೈರಾಣುವನ್ನು ಪತ್ತೆಹಚ್ಚುವ ಪರೀಕ್ಷೆಗಳ ಬದಲಿಗೆ, ರೋಗದ ಲಕ್ಷಣಗಳ ಆಧಾರದ ಮೇಲೆ ಸಮಗ್ರವಾಗಿ ಪರೀಕ್ಷಿಸುವ ಸಿಂಡ್ರೋಮಿಕ್ ವಿಧಾನವನ್ನು ಅಳವಡಿಸಿಕೊಳ್ಳಬೇಕು’ ಎಂದು ನವದೆಹಲಿಯ ಐಸಿಎಂಆರ್ ಸಾಂಕ್ರಾಮಿಕ ರೋಗಗಳ ವಿಭಾಗ ಮುಖ್ಯಸ್ಥೆ ಡಾ.ನಿವೇದಿತಾ ಗುಪ್ತಾ ಹೇಳಿದರು.

ಮಾಹೆಯ ಅಂಗಸಂಸ್ಥೆ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ಪುಣೆಯ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈರಾಲಜಿ ಸಂಸ್ಥೆ ಹಮ್ಮಿಕೊಂಡಿದ್ದ 2 ದಿನಗಳ ‘ವೈರೊಗ್ಲೋಬಲ್ 2026’ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಅವರು ಮಾತನಾಡಿದರು.

ನಮ್ಮ ದೇಶದಲ್ಲೇ ತಯಾರಿಸಿದ, ಕೈಗೆಟುಕುವ ದರದಲ್ಲಿ, ತ್ವರಿತವಾಗಿ ಫಲಿತಾಂಶ ನೀಡುವ ರೋಗ ನಿರ್ಣಯ ಸಾಧನಗಳನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ ಎಂದರು. ಎಂಐವಿ ನಿರ್ದೇಶಕ ಡಾ. ಚಿರಂಜಯ್ ಮುಖೋಪಾಧ್ಯಾಯ, ಐಸಿಎಂಆರ್– ಎನ್ಐವಿಯ ನಿರ್ದೇಶಕ ಡಾ.ನವೀನ್ ಕುಮಾರ್, ಮಾಹೆ ಕುಲಪತಿ ಲೆಫ್ಟಿನೆಂಟ್ ಜನರಲ್ ಎಂ.ಡಿ. ವೆಂಕಟೇಶ್, ಸಹ ಕುಲಪತಿ ಡಾ.ಶರತ್ ಕೆ. ರಾವ್, ಸಮ್ಮೇಳನದ ಸಹ ಸಂಘಟನಾ ಕಾರ್ಯದರ್ಶಿಗಳಾದ ಮುಂಬೈ ಐಸಿಎಂಆರ್ ಎನ್ಐವಿ ಘಟಕದ ಪ್ರಭಾರ ಅಧಿಕಾರಿ ಡಾ.ಶೈಲೇಶ್ ಡಿ. ಪವಾರ್, ಎಂಐವಿ ಸಹ ಪ್ರಾಧ್ಯಾಪಕಿ ಡಾ.ಅನಿತಾ ಜೆ. ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-28-1445226951

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.