ಗುರುವಾರ , ಸೆಪ್ಟೆಂಬರ್ 23, 2021
26 °C

ದೇಶದಲ್ಲಿ 30 ಲಕ್ಷಕ್ಕೂ ಅಧಿಕ ವಾಟ್ಸ್‌ಆ್ಯಪ್ ಖಾತೆಗಳಿಗೆ ನಿರ್ಬಂಧ

ಪಿಟಿಐ Updated:

ಅಕ್ಷರ ಗಾತ್ರ : | |

ನವದಹೆಲಿ: ಜೂನ್ 16ರಿಂದ ಜುಲೈ 31ರ ವರೆಗಿನ ಅವಧಿಯಲ್ಲಿ ಭಾರತದಲ್ಲಿ 30 ಲಕ್ಷಕ್ಕೂ ಅಧಿಕ ವಾಟ್ಸ್‌ಆ್ಯಪ್ ಖಾತೆಗಳನ್ನು ನಿರ್ಬಂಧಿಸಿರುವುದಾಗಿ ಸಂಸ್ಥೆಯು ತಿಳಿಸಿದೆ.

ಈ ಅವಧಿಯಲ್ಲಿ ಭಾರತದಲ್ಲಿ 30,27,000 ಖಾತೆಗಳನ್ನು ನಿರ್ಬಂಧಿಸಲಾಗಿದ್ದು, 594 ಕಂದುಕೊರತೆ ದೂರುಗಳು ದಾಖಲಾಗಿವೆ ಎಂದು ಹೇಳಿದೆ.

ಇದನ್ನೂ ಓದಿ: 

ಭಾರತೀಯ ಖಾತೆಗಳನ್ನು '+91' ಮೊಬೈಲ್ ಸಂಖ್ಯೆಯ ಮೂಲಕ ಗುರುತಿಸಲಾಗಿದೆ ಎಂದು ತಿಳಿಸಿದೆ.

ಈ ಹಿಂದೆ ಶೇ. 95 ನಿರ್ಬಂಧವು ಸ್ವಯಂಚಾಲಿತ ಅಥವಾ ಸ್ಪ್ಯಾಮ್‌ಗೆ ಸಂಬಂಧಪಟ್ಟಿವೆ. ಜಾಗತಿಕವಾಗಿ ತಿಂಗಳಿಗೆ ಸರಾಸರಿ 80 ಲಕ್ಷ ಖಾತೆಗಳನ್ನು ನಿರ್ಬಂಧಿಸಿರುವುದಾಗಿ ತಿಳಿಸಿದೆ.

ಬಳಕೆದಾರರ ಖಾತೆಯ ಸುರಕ್ಷತೆಗಾಗಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ), ಡೇಟಾ ಸೈನ್ಸ್ ಇತ್ಯಾದಿ ತಂತ್ರಜ್ಞಾನಗಳಲ್ಲಿ ಹೆಚ್ಚಿನ ಹೂಡಿಕೆ ಮಾಡಲಾಗಿದೆ ಎಂದು ಸಂಸ್ಥೆಯು ತಿಳಿಸಿದೆ.

ನೂತನ ಐಟಿ ನಿಯಮ 2021ರ ಪ್ರಕಾರ ಜೂನ್ 16ರಿಂದ ಜುಲೈ 31ರ ವರೆಗೆ 46 ದಿನಗಳ ಅವಧಿಯ ಎರಡನೇ ಮಾಸಿಕ ವರದಿಯನ್ನು ಪ್ರಕಟಿಸಲಾಗಿದೆ ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು