ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಯ್ಸ್ ಲಾಕರ್ ರೂಂ ಇನ್‌ಸ್ಟಾಗ್ರಾಂ ಗ್ರೂಪಿನ ಆಡ್ಮಿನ್ ವಿದ್ಯಾರ್ಥಿ ಬಂಧನ

Last Updated 6 ಮೇ 2020, 11:36 IST
ಅಕ್ಷರ ಗಾತ್ರ

ನವದೆಹಲಿ: ‘ಬಾಯ್ಸ್‌ ಲಾಕರ್‌ ರೂಂ’ ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಟಾಗ್ರಾಂ ಗ್ರೂಪಿನ ಆಡ್ಮಿನ್ ವಿದ್ಯಾರ್ಥಿಯನ್ನು ಬಂಧಿಸಿರುವುದಾಗಿ ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ.

ವಿದ್ಯಾರ್ಥಿಯನ್ನು ನೊಯ್ಡಾದಲ್ಲಿ ಬಂಧಿಸಲಾಗಿದೆ. ಬಂಧಿತನ ಮಾಹಿತಿ ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಬಂಧಿತನಾಗಿರುವ ಅಪ್ರಾಪ್ತ ಕನಿಷ್ಠ 10 ಮಂದಿಯನ್ನು ಗುರುತಿಸುವಲ್ಲಿ ನೆರವಾಗಿದ್ದಾನೆ.

ಬಂಧಿತನ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿದೆಯೇ ಅಥವಾ ಅದಕ್ಕಿಂತ ಕಡಿಮೆಯೇ ಎಂಬ ಬಗ್ಗೆ ಗೊಂದಲವಿದೆ. ಹೀಗಾಗಿ ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿಯಲ್ಲಿ ಹುಡುಗರ ಗುಂಪೊಂದು ಇನ್‌ಸ್ಟಾಗ್ರಾಂನಲ್ಲಿ ‘ಬಾಯ್ಸ್ ಲಾಕರ್ ರೂಂ’ ಹೆಸರಿನ ಗ್ರೂಪ್ ಆರಂಭಿಸಿತ್ತು. ಇದರಲ್ಲಿ ಸರಿ ಸುಮಾರು 100 ಸದಸ್ಯರಿದ್ದು, ಹೆಚ್ಚಿನವರು ದಕ್ಷಿಣ ದೆಹಲಿಯವರಾಗಿದ್ದಾರೆ. ಅಪ್ರಾಪ್ತ ಬಾಲಕಿಯರ ಆಕ್ಷೇಪಾರ್ಹ ಫೋಟೊಗಳನ್ನು ಕಳುಹಿಸಲು, ಅವುಗಳನ್ನು ತಿರುಚಿ ಅವರ ಬಗ್ಗೆ ಕೆಟ್ಟದಾಗಿ ಬೈದು ನಿಂದಿಸಲು ಗ್ರೂಪ್ ಬಳಕೆಯಾಗುತ್ತಿತ್ತು. ಹುಡುಗಿಯರನ್ನು ಸಾಮೂಹಿಕ ಅತ್ಯಾಚಾರ ಮಾಡುವ ಬಗ್ಗೆಯೂ ಗ್ರೂಪ್‌ನಲ್ಲಿ ಚರ್ಚೆಯಾಗಿತ್ತು ಎನ್ನಲಾಗಿದೆ.

ಇನ್‌ಸ್ಟಾಗ್ರಾಂ ಗ್ರೂಪ್‌ನಲ್ಲಿ ಹಂಚಿಕೆಯಾದ ಕೆಲವು ಸಂದೇಶಗಳ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಕೃತ್ಯ ಬೆಳಕಿಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಪೊಲೀಸರು ಈ ಹಿಂದೆಯೇ ಅಪ್ರಾಪ್ತ ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದು, 20 ವಿದ್ಯಾರ್ಥಿಗಳ ಗುರುತನ್ನು ಪತ್ತೆಹಚ್ಚಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT