ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಅವರೇ ಕೊಹ್ಲಿಯನ್ನು ಬಂಧಿಸಿ, ನಮಗೆ ನ್ಯಾಯ ಕೊಡಿಸಿ: ರೋಹಿತ್ ಅಭಿಮಾನಿ ಮನವಿ

ಟ್ವಿಟರ್‌ನಲ್ಲಿ ಟ್ರೆಂಡ್‌ ಆಯ್ತು #ArrestKohli
Last Updated 15 ಅಕ್ಟೋಬರ್ 2022, 6:26 IST
ಅಕ್ಷರ ಗಾತ್ರ

ಚೆನ್ನೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ವಿರಾಟ್‌ ಕೊಹ್ಲಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಎಂಬ ಕಾರಣಕ್ಕೆ ಅಭಿಮಾನಿಯೊಬ್ಬ ತನ್ನ ಸ್ನೇಹಿತನನ್ನೇ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ವರದಿಯಾಗಿದೆ.

ಘಟನೆ ಬೆನ್ನಲ್ಲೇ ರೋಹಿತ್‌ ಶರ್ಮಾ ಬೆಂಬಲಿಗರು ಟ್ವಿಟರ್‌ನಲ್ಲಿ ವಿರಾಟ್‌ ಕೊಹ್ಲಿ ವಿರುದ್ಧ ಮುಗಿಬಿದ್ದಿದ್ದಾರೆ.

#ArrestKohli ಹ್ಯಾಶ್‌ಟ್ಯಾಗ್‌ನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭವಾಗಿದ್ದು, ರೋಹಿತ್‌ ಅಭಿಮಾನಿಗಳು ಸಾಥ್ ನೀಡಿದ್ದಾರೆ.

ಕೊಲೆ ಮಾಡಿರುವ ಯುವಕ ವಿರಾಟ್ ಕೊಹ್ಲಿ ಅಭಿಮಾನಿಯಾದರೆ, ಸಾವಿಗೀಡಾದವ ರೋಹಿತ್‌ ಶರ್ಮಾ ಅಭಿಮಾನಿ.

ಮೃತ ಯುವಕನನ್ನು ಪಿ. ವಿಘ್ನೇಶ್ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪದ ಮೇಲೆ 21 ವರ್ಷದ ಎಸ್.ಧರ್ಮರಾಜ್ ಎಂಬ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಘ್ನೇಶ್ ಸಾವು ಪ್ರಕರಣ ಇದೀಗ ರೋಹಿತ್ –ಕೊಹ್ಲಿ ಅಭಿಮಾನಿಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.

‘ವಿಘ್ನೇಶ್ ಅವರು ರೋಹಿತ್ ಶರ್ಮಾ ಅವರ ಅಭಿಮಾನಿಯಾಗಿದ್ದರು ಎಂಬ ಕಾರಣಕ್ಕೆ ಎಲ್ಲರೂ ಸುಮ್ಮನಿದ್ದಾರೆ. ಪ್ರಧಾನಿ ಮೋದಿಯವರೇ, ಕೊಹ್ಲಿ ಅವರನ್ನು ಬಂಧಿಸಿ, ನಮಗೆ ನ್ಯಾಯ ಕೊಡಿಸಿ’ ಎಂದು ಹರ್ಷಿತ್ ಎಂಬುವರು ಟ್ವೀಟ್ ಮಾಡಿದ್ದಾರೆ.

‘ಇಂತಹ ಅಮಾನವೀಯ ಘಟನೆಯಿಂದಾಗಿ ಕೊಹ್ಲಿ ಅಭಿಮಾನಿಗಳಿಗೆ ನಾಚಿಕೆಯಾಗಿಲ್ಲ. ಅಭಿಮಾನಿಗಳು ಕೂಡ ಕೊಹ್ಲಿಯೊಂದಿಗೆ ಜೈಲಿಗೆ ಹೋಗಲು ಅರ್ಹರಾಗಿದ್ದಾರೆ’ ಎಂದು ಆಶಿಮ್ ಟ್ವೀಟ್ ಮಾಡಿದ್ದಾರೆ.

ಇದು ವಿರಾಟ್‌ ಕೊಹ್ಲಿಯವರಿಂದ ಆಗಿರುವ ತಪ್ಪಲ್ಲ ಎಂದು ಹೇಳುವ ಮೂಲಕ ಕೊಹ್ಲಿ ಅಭಿಮಾನಿಗಳು ರೋಹಿತ್ ಅಭಿಮಾನಿಗಳಿಗೆ ತಿರುಗೇಟು ನೀಡಿದ್ದಾರೆ.

ರೋಹಿತ್ ಅಭಿಮಾನಿಗಳೆಲ್ಲರೂ ನಾಚಿಕೆಯಿಲ್ಲದವರು. ನೀವು #ArrestKohli ಹ್ಯಾಶ್‌ಟ್ಯಾಗ್‌ ಅನ್ನು ಏಕೆ ಟ್ರೆಂಡ್ ಮಾಡುತ್ತಿದ್ದೀರಿ? ಇದು ಕೊಹ್ಲಿ ಅವರಿಂದಾದ ಅಪರಾಧವಲ್ಲ. ನಿಯಮಗಳನ್ನು ಅರಿತುಕೊಳ್ಳಿ ಎಂದು ಹರ್ಷಿಲ್ ವಾಸವ ಟ್ವೀಟ್‌ ಮಾಡಿದ್ದಾರೆ.

ಏನಿದು ಘಟನೆ: ಅರಿಯಾಲೂರು ಜಿಲ್ಲೆಯ ಪೊಯ್ಯೂರು ಗ್ರಾಮದವರಾದ ವಿಘ್ನೇಶ್ ಮತ್ತು ಧರ್ಮರಾಜ್ ಅಪ್ಪಟ ಕ್ರಿಕೆಟ್ ಅಭಿಮಾನಿಗಳಾಗಿದ್ದರು. ಐಟಿಐ ಮುಗಿಸಿದ್ದ ವಿಘ್ನೇಶ್ ಸಿಂಗಪುರಕ್ಕೆ ತೆರಳಲು ಉದ್ಯೋಗ ವೀಸಾಗಾಗಿ ಕಾಯುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

ವಿಘ್ನೇಶ್ ಮತ್ತು ಧರ್ಮರಾಜ್ ಮಂಗಳವಾರ ರಾತ್ರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್ ಪ್ರದೇಶದಲ್ಲಿ ಮದ್ಯ ಸೇವಿಸಿ, ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಇಬ್ಬರಲ್ಲಿ ಯಾರು ಉತ್ತಮ ಆಟಗಾರ ಎಂಬುದರ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಗಲಾಟೆ ಮಾಡಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರ್‌ಸಿಬಿ ಮತ್ತು ವಿರಾಟ್ ಕೊಹ್ಲಿ ಬಗ್ಗೆ ವಿಘ್ನೇಶ್ ಅಪಹಾಸ್ಯ ಮಾಡಿದ್ದರು. ಇದರಿಂದ ಕುಪಿತಗೊಂಡ ಧರ್ಮರಾಜ್, ವಿಘ್ನೇಶ್ ಮೇಲೆ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಜತೆಗೆ ಬ್ಯಾಟ್‌ನಿಂದ ತಲೆಗೆ ಹೊಡೆದಿದ್ದಾನೆ. ಘಟನೆ ಬಳಿಕ ಧರ್ಮರಾಜ್ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT