ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಟೆಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ದೇಶದಾದ್ಯಂತ ಕಿಡಿ ಹೊತ್ತಿಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಸಾಮಾಜಿಕ ಮಾಧ್ಯಮಗಳಲ್ಲೂ #JusticeForAtulSubhash ಮತ್ತು #BengaluruSuicideCase ಹ್ಯಾಶ್ಟ್ಯಾಗ್ಗಳು ಟ್ರೆಂಡ್ ಆಗಿವೆ. ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲೂ ಬಳಕೆದಾರರು ನ್ಯಾಯಕ್ಕಾಗಿ ಬೇಡಿಕೆ ಇರಿಸಿದ್ದಾರೆ.

ಭಾರತದಲ್ಲಿ ನ್ಯಾಯ ವ್ಯವಸ್ಥೆಯು ಹದಗೆಟ್ಟಿದ್ದು, ನ್ಯಾಯಾಂಗ ವ್ಯವಸ್ಥೆಯೇ ಸಂಪೂರ್ಣವಾಗಿ ಬದಲಾಗಬೇಕಿದೆ ಎಂದು ಮತ್ತೊಬ್ಬ ಬಳಕೆದಾರರು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಲಿಂಗ ಸಮಾನತೆಯ ನ್ಯಾಯಕ್ಕಾಗಿ ಮೊರೆ ಇಟ್ಟಿದ್ದಾರೆ.

ಅತುಲ್ ಸುಭಾಷ್ ಅವರ ಪತ್ನಿಯನ್ನು ಕೆಲಸದಿಂದ ತೆಗೆದು ಹಾಕುವಂತೆಯೂ ಬೇಡಿಕೆ ಬಲವಾಗಿ ಕೇಳಿಬಂದಿದೆ.

ಈ ನಡುವೆ ಖಾಸಗಿ ಕಂಪನಿಯ ನಿರ್ದೇಶಕ, ಉತ್ತರ ಪ್ರದೇಶದ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣವನ್ನು ಭೇದಿಸಲು ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಹೋದರ ಬಿಕಾಸ್ ಕುಮಾರ್ ಅವರು ನೀಡಿದ ದೂರು ಆಧರಿಸಿ ಅತುಲ್ ಸುಭಾಷ್ ಅವರ ಪತ್ನಿ, ಆಕೆಯ ತಾಯಿ, ಸಹೋದರ ಹಾಗೂ ಚಿಕ್ಪಪ್ಪನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಆತ್ಮಹತ್ಯೆಗೂ ಮುನ್ನ ಅತುಲ್ ಸುಭಾಷ್ ಮಾಡಿದ್ದ 90 ನಿಮಿಷಗಳ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. 'ಭಾರತದಲ್ಲಿ ನರಮೇಧ ನಡೆಯುತ್ತಿದೆ. ಜನರನ್ನು ರಕ್ಷಿಸಿ ವಾಕ್ ಸ್ವಾತಂತ್ರ್ಯ ಮರುಸ್ಥಾಪಿಸಿ' ಎಂದು ಮನವಿ ಮಾಡಿದ್ದರಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಟೆಸ್ಲಾ ಕಂಪನಿ ಸಿಇಒ ಇಲಾನ್ ಮಸ್ಕ್ ಅವರ ನೆರವನ್ನು ಕೇಳಿದ್ದರು.
.ಭಾರತದಲ್ಲಿ ನರಮೇಧ ನಡೆಯುತ್ತಿದೆ ಎಂದು ಅಮೆರಿಕ ಅಧ್ಯಕ್ಷರ ನೆರವು ಕೇಳಿದ್ದ ಟೆಕಿ!.ಭಾರತದಲ್ಲಿ ನರಮೇಧ ನಡೆಯುತ್ತಿದೆ ಎಂದು ಅಮೆರಿಕ ಅಧ್ಯಕ್ಷರ ನೆರವು ಕೇಳಿದ್ದ ಟೆಕಿ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.