ಸೋಮವಾರ, ಜೂನ್ 21, 2021
29 °C

ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್‌ಗೆ ಸೂಚಿಸಿದ್ದೇಕೆ?: ಸರ್ಕಾರದ ಸ್ಪಷ್ಟನೆ ಹೀಗಿದೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೋವಿಡ್‌–19 ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ಟೀಕಿಸಿ ಪ್ರಚೋದನಾತ್ಮಕ ಸಂದೇಶವನ್ನು ಪ್ರಕಟಿಸಿದ್ದ ಸುಮಾರು 100ಕ್ಕೂ ಹೆಚ್ಚು ಪೋಸ್ಟ್‌ಗಳನ್ನು ತೆಗೆದು ಹಾಕಿರುವ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದೆ.

ಕೇಂದ್ರ ಸರ್ಕಾರದ ವಿರುದ್ಧ ಪ್ರಚೋದನಾತ್ಮಕ ಸಂದೇಶ ಹಾಗೂ ಪ್ರಸ್ತುತ ಸನ್ನಿವೇಶಕ್ಕೆ ಸಂಬಂಧವಿಲ್ಲದ, ಹಳೆಯ ಚಿತ್ರಗಳು ಮತ್ತು ದೃಶ್ಯಗಳು, ಕೋವಿಡ್‌ ನಿಯಮಾವಳಿಗಳ ಬಗ್ಗೆ ತಪ್ಪು ಮಾಹಿತಿ ಹಂಚಿಕೊಳ್ಳುವಂತಹ ಪೋಸ್ಟ್‌ಗಳನ್ನು ಅಳಿಸಿ ಹಾಕುವಂತೆ ಟ್ವಿಟರ್‌, ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್‌ಗೆ ಮನವಿ ಮಾಡಲಾಗಿತ್ತು.

ಭಾರತದಲ್ಲಿ ಕೋವಿಡ್‌–19 ಹೆಚ್ಚಳ ಮತ್ತು ಕುಂಭ ಮೇಳದ ಕುರಿತು ಟ್ವೀಟ್‌ಗಳಲ್ಲಿ ಮಾಡಲಾಗಿತ್ತು. ಕೇಂದ್ರ ಸರ್ಕಾರದ ಮನವಿ ಮೇರೆಗೆ ಸಾಮಾಜಿಕ ಮಾಧ್ಯಮವು ಟ್ವೀಟ್‌ಗಳನ್ನು ಅಳಿಸಿ ಹಾಕಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶದ ಅನ್ವಯ ಟ್ವಿಟರ್ ಈಗಾಗಲೇ 50 ಟ್ವೀಟ್‌ಗಳನ್ನು ತೆಗೆದು ಹಾಕಿದೆ. ಉಳಿದಂತೆ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ಗಳನ್ನು ತೆಗೆದು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವಾಲಯದ ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ವಕ್ತಾರ ಪವನ್‌ ಖೇರಾ, ಕಾಂಗ್ರೆಸ್‌ ಸಂಸದ ರೇವಂತ್‌ ರೆಡ್ಡಿ ಹಾಗೂ ಪಶ್ಚಿಮ ಬಂಗಾಳದ ಸಚಿವ ಮಲಯ್‌ ಘಟಕ್‌ ಸೇರಿದಂತೆ ಹಲವು ಜನರ ಟ್ವೀಟ್‌ಗಳನ್ನು ತೆಗೆದು ಹಾಕಲಾಗಿದೆ. ಬಹುತೇಕ ಟ್ವೀಟ್‌ಗಳಲ್ಲಿ ಎನ್‌ಡಿಎ ಸರ್ಕಾರದ ಕ್ರಮಗಳನ್ನು ಟೀಕಿಸಲಾಗಿತ್ತು.

ಪ್ರಶ್ನಾರ್ಹವಾದ ಪೋಸ್ಟ್‌ಗಳಲ್ಲಿ ಕೋವಿಡ್‌ ಮೃತದೇಹಗಳಿಗೆ ಬೆಂಕಿಯಿಡುವ, ಶವಸಂಸ್ಕಾರದ ಚಿತ್ರಗಳನ್ನು ತೋರಿಸಲಾಗಿತ್ತು. ಸಾರ್ವಜನಿಕರನ್ನು ಪ್ರಚೋದಿಸುವ ಮತ್ತು ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಕಾರಣವಾಗುವ ಪ್ರಚೋದನಾತ್ಮಕ ಸಂದೇಶಗಳಿದ್ದವು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ... ಕೋವಿಡ್‌: ಕೇಂದ್ರ ಸರ್ಕಾರವನ್ನು ಟೀಕಿಸಿ ಟ್ವೀಟ್‌, ಅಳಿಸಿ ಹಾಕಿದ ಟ್ವಿಟರ್‌!

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು