ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿನಲ್ಲಿ 10ನೇ ತರಗತಿ ಪರೀಕ್ಷೆ ರದ್ದು; ಟ್ವಿಟರ್‌ನಲ್ಲಿ AllPass ಟ್ರೆಂಡ್

ಅಕ್ಷರ ಗಾತ್ರ

ಬೆಂಗಳೂರು:ತಮಿಳುನಾಡು ಸರ್ಕಾರ 10ನೇ ತರಗತಿ ಪರೀಕ್ಷೆಯನ್ನು ರದ್ದು ಮಾಡಿದ್ದು,9 ಲಕ್ಷ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲು ನಿರ್ಧರಿಸಿದೆ. 10ನೇ ತರಗತಿ ಪರೀಕ್ಷೆ ನಡೆಸದೇ ತೆಲಂಗಾಣ ಸರ್ಕಾರ ವಿದ್ಯಾರ್ಥಿಗಳಿಗೆ ಬಡ್ತಿ ನೀಡುವುದಾಗಿ ಸೋಮವಾರ ನಿರ್ಧಾರ ಪ್ರಕಟಿಸಿತ್ತು. ತಮಿಳುನಾಡು ಸರ್ಕಾರದ ನಿರ್ಧಾರ ಪ್ರಕಟವಾಗುತ್ತಿದ್ದಂತೆ ಟ್ವಿಟರ್‌ನಲ್ಲಿ #AllPass ಹ್ಯಾಷ್‌ಟ್ಯಾಗ್ ಟ್ರೆಂಡ್ ಆಗಿದೆ.

ಹಲವಾರು ಮೀಮ್, ತಮಾಷೆಯ ಬರಹಗಳೊಂದಿಗೆ ತಮಿಳುನಾಡಿನ ವಿದ್ಯಾರ್ಥಿಗಳ ಖುಷಿಯನ್ನು ಸಂಭ್ರಮಿಸುವ ಟ್ವೀಟ್‌ಗಳು, ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಆಗಿವೆ.

ಈ ನಡುವೆ #JusticeForStudents ಎಂಬ ಹ್ಯಾಷ್‌ಟ್ಯಾಗ್ ಕೂಡಾ ಟ್ರೆಂಡ್ ಆಗುತ್ತಿದೆ. ಮಹಾರಾಷ್ಟ್ರದಲ್ಲಿ ಅಂತಿಮ ಪದವಿ ಪರೀಕ್ಷೆ ರದ್ದು ಮಾಡುವುದಾಗಿ ಸರ್ಕಾರ ಹೇಳಿತ್ತು. ಆದರೆ ಯುನಿವರ್ಸಿಟಿ ಕಾಯ್ದೆ ಪ್ರಕಾರ ಪರೀಕ್ಷೆ ನಡೆಸಲಾಗುವುದು ಎಂದು ಮಹಾರಾಷ್ಟ್ರ ಗವರ್ನರ್ ಹೇಳಿದ್ದಾರೆ. ಆದರೆ ಪರೀಕ್ಷೆ ನಡೆಯುತ್ತದೋ ಇಲ್ಲವೋ ಎಂಬುದರ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟ ಮಾಹಿತಿ ಈವರೆಗೆ ಸಿಕ್ಕಿಲ್ಲ. ಇದನ್ನೇ ಪ್ರಶ್ನಿಸಿ #JusticeForStudents ಎಂಬ ಹ್ಯಾಷ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡ್ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT