ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ವಿಟರ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರ: ದೆಹಲಿ ಪೊಲೀಸರಿಂದ ನೋಟಿಸ್‌

Last Updated 30 ಜೂನ್ 2021, 9:51 IST
ಅಕ್ಷರ ಗಾತ್ರ

ನವದೆಹಲಿ: ಚುಟುಕು ಸಂದೇಶ ತಾಣದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳ ಪ್ರಸಾರವನ್ನು ತಡೆಯುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ವಿವರ ನೀಡುವಂತೆ ಟ್ವಿಟರ್‌ ಸಂಸ್ಥೆಗೆ ದೆಹಲಿ ಪೊಲೀಸರು ಬುಧವಾರ ನೋಟಿಸ್‌ ಜಾರಿ ಮಾಡಿದ್ದಾರೆ.

ಟ್ವಿಟರ್‌ನಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳು ಪ್ರದರ್ಶನವಾಗುತ್ತಿರುವ ಕುರಿತು ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ (ಎನ್‌ಸಿಪಿಸಿಆರ್‌) ನೀಡಿರುವ ದೂರಿನ ಮೇರೆಗೆ ದೆಹಲಿ ಪೊಲೀಸರು ಟ್ವಿಟರ್ ವಿರುದ್ಧ ಮಂಗಳವಾರ ಎಫ್‌ಐಆರ್‌ ದಾಖಲಿಸಿದ್ದಾರೆ.

ಮಕ್ಕಳ ಅಶ್ಲೀಲ ಚಿತ್ರಗಳ ಪ್ರಸಾರವನ್ನು ತಡೆಯಲು ತೆಗೆದುಕೊಂಡಿರುವ ಕ್ರಮಗಳು ಹಾಗೂ ಅದನ್ನು ಪ್ರಸಾರ ಮಾಡುತ್ತಿರುವ ಖಾತೆಗಳ ಬಗೆಗಿನ ವಿವರಗಳನ್ನು ನೀಡುವಂತೆ ಪೊಲೀಸರು ಟ್ವಿಟರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಮಂಗಳವಾರವೇ ಟ್ವಿಟರ್‌ಗೆ ನೋಟಿಸ್‌ ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆ, ಮಾಹಿತಿ ತಂತ್ರಜ್ಞಾನ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳ ಅನ್ವಯ ಟ್ವಿಟರ್‌ ವಿರುದ್ಧ ದೂರು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟ್ವಿಟರ್‌ನಲ್ಲಿ ಅಶ್ಲೀಲ ಚಿತ್ರಗಳ ವೀಕ್ಷಣೆ ಹಾಗೂ ಪ್ರದರ್ಶನಕ್ಕೆ ಅವಕಾಶ ಲಭ್ಯವಾಗುತ್ತಿದೆ ಎಂದು ಮೇ 29ರಂದೇ ದೂರು ನೀಡಿದ್ದರೂ ಈ ಸಾಮಾಜಿಕ ಜಾಲತಾಣದ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ ಎಂದು ದೆಹಲಿ ಸೈಬರ್‌ ಪೊಲೀಸ್‌ ವಿಭಾಗದ ಡಿಸಿಪಿ ಅನೀಶ್‌ ರಾಯ್‌ ಅವರನ್ನು ಕೆಲವು ದಿನಗಳ ಹಿಂದೆ ಎನ್‌ಸಿಪಿಸಿಆರ್‌ ಪ್ರಶ್ನಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT