ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಶೀಘ್ರವೇ ವಿಡಿಯೊ –ಆಡಿಯೊ ಕರೆ ವೈಶಿಷ್ಟ್ಯ: ಮಸ್ಕ್

Published 31 ಆಗಸ್ಟ್ 2023, 8:02 IST
Last Updated 31 ಆಗಸ್ಟ್ 2023, 8:02 IST
ಅಕ್ಷರ ಗಾತ್ರ

ಬೆಂಗಳೂರು: ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಅವರು ಮೈಕ್ರೋಬ್ಲಾಗಿಂಗ್ ಜಾಲತಾಣ ‘ಎಕ್ಸ್‌’ನಲ್ಲಿ (ಟ್ವಿಟರ್) ವಿಡಿಯೊ –ಆಡಿಯೊ ಕರೆ ವೈಶಿಷ್ಟ್ಯವನ್ನು ಪರಿಚಯಿಸುವುದಾಗಿ ಘೋಷಣೆ ಮಾಡಿದ್ದಾರೆ.

‘ಎಕ್ಸ್‌’ನಲ್ಲಿ ಉದ್ಯೋಗಾವಕಾಶದ ವೈಶಿಷ್ಟ್ಯವನ್ನು ಪರಿಚಯಿಸುವುದಾಗಿ ಇತ್ತೀಚೆಗೆ ಮಸ್ಕ್‌ ಘೋಷಿಸಿದ್ದರು.

ಈಗ ವೆರಿಫೈಡ್ ಸಂಸ್ಥೆಗಳಿಗೆ ಎಕ್ಸ್‌ನಲ್ಲಿ ಉದ್ಯೋಗಾವಕಾಶದ (Job Listing) ಕುರಿತು ಪೋಸ್ಟ್ ಮಾಡುವ ಸೇವೆಯನ್ನು ಪ್ರಾರಂಭಿಸಿದೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್‌ನಲ್ಲಿ ವಿವರಣೆ ನೀಡಿತ್ತು. ಜಾಬ್ ಲಿಸ್ಟಿಂಗ್ ಫೀಚರ್ ಸದ್ಯ ಬೀಟಾ ವರ್ಷನ್‌ನಲ್ಲಿದೆ.

ಕೆಲವು ಸಮಯಗಳ ಹಿಂದೆಯಷ್ಟೇ ಎಲಾನ್ ಮಸ್ಕ್ ಅವರು ಟ್ವಿಟರ್ ಹೆಸರನ್ನು ‘ಎಕ್ಸ್’ ಎಂದು ಮರುನಾಮಕರಣ ಮಾಡಿದ್ದರು.

ಎಲಾನ್ ಮಸ್ಕ್ ಅವರು ಟ್ವಿಟರ್‌ ಅನ್ನು ಖರೀದಿಸಿದ ಬಳಿಕ ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುವ ಮೂಲಕ ಹಲವು ಬದಲಾವಣೆಗಳನ್ನು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT