ಶುಕ್ರವಾರ, ಅಕ್ಟೋಬರ್ 22, 2021
21 °C

ಫೇಸ್‌ಬುಕ್‌, ವಾಟ್ಸಾಪ್‌, ಇನ್‌ಸ್ಟಾಗ್ರಾಂ, ಮೆಸೆಂಜರ್‌ ಡೌನ್‌ !

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ದೆಹಲಿ:  ಪ್ರಪಂಚದ ಅತ್ಯಂತ ಜನಪ್ರಿಯ ಸಾಮಾಜಿಕ ಮಾಧ್ಯಮಳಾದ ಫೇಸ್‌ಬುಕ್‌, ಇನ್‌ಸ್ಟಾಗ್ರಾಮ್‌, ವಾಟ್ಸಾಪ್‌ ಮತ್ತು ಫೇಸ್‌ಬುಕ್‌ ಮೆಸೆಂಜರ್‌ಗಳು ಸೋಮವಾರ ಸಂಜೆಯಿಂದ  ಸ್ಥಗಿತಗೊಂಡಿವೆ. 

ಬಳಕೆದಾರರು ಆ್ಯಪ್‌ಗಳ ಬಳಕೆಯಲ್ಲಿ ಎದುರಿಸುತ್ತಿರುವ ತೊಂದರೆಯ ಕುರಿತು ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಗಹನ ಚರ್ಚೆ ನಡೆಸಿದ್ದಾರೆ. ಹೀಗಾಗಿ ಫೇಸ್‌ಬುಕ್‌, ವಾಟ್ಸ್‌ಆ್ಯಪ್‌ ಎಂಬ ವಿಷಯಗಳು ಟ್ವಿಟರ್‌ನಲ್ಲಿ ಟ್ರೆಂಡ್‌ ಆಗಿವೆ. 

ವೆಬ್‌ಸೈಟ್‌ಗಳು ಮತ್ತು ಸೇವೆಗಳ ಸ್ಥಿತಿಯ ಬಗ್ಗೆ ಮಾಹಿತಿ ಒದಿಗಿಸುವ ವೆಬ್‌ಸೈಟ್‌ ‘ಡೌನ್‌ ಡಿಟೆಕ್ಟರ್‌’ ಪ್ರಕಾರ ಫೇಸ್‌ಬುಕ್‌ ಒಡೆತನದ ಸಾಮಾಜಿಕ ಮಾಧ್ಯಮಗಳಲ್ಲಿ ಸಂಜೆ ಐದು ಗಂಟೆಯಿಂದಲೇ ಸಮಸ್ಯೆ ಎದುರಾಗಿದೆ. ನಂತರ ಸಮಸ್ಯೆಯು ವಿಶ್ವದೆಲ್ಲೆಡೆ ಕಾಣಿಸಿಕೊಂಡಿದೆ.  

ಈ ಕುರಿತು ಪ್ರತಿಕ್ರಿಯಿಸಿರುವ ಫೇಸ್‌ಬುಕ್‌, ‘ನಮ್ಮ ಆ್ಯಪ್‌ ಮತ್ತು ಉತ್ಪನ್ನಗಳ ಬಳಕೆಯಲ್ಲಿ ಗ್ರಾಹಕರು ಸಮಸ್ಯೆ ಅನುಭವಿಸುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸೇವೆಯನ್ನು ಆದಷ್ಟು ಶೀಘ್ರವೇ ಸಹಜ ಸ್ಥಿತಿಗೆ  ತರಲು ನಾವು ಪ್ರಯತ್ನಿಸುತ್ತಿದ್ದೇವೆ. ಸಮಸ್ಯೆಗೆ ನಾವು ಕ್ಷೇಮೆ ಕೋರುತ್ತೇವೆ,’ ಎಂದು ಫೇಸ್‌ಬುಕ್‌ ಹೇಳಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು