ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಬಗ್ಗೆ ತಪ್ಪು ಸಂದೇಶ: ಹಲವು ಖಾತೆಗಳನ್ನು ನಿಷೇಧಿಸಿದ ಫೇಸ್‌ಬುಕ್

Last Updated 19 ಆಗಸ್ಟ್ 2021, 7:37 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಕೋವಿಡ್‌ ಲಸಿಕೆ ಕುರಿತಂತೆ ತಪ್ಪು ಸಂದೇಶಗಳನ್ನು ಬಿತ್ತರಿಸುತ್ತಿದ್ದ 3 ಡಜನ್‌ಗೂ ಹೆಚ್ಚು ಫೇಸ್‌ಬುಕ್‌ ಪೇಜ್‌ಗಳನ್ನು ನಿಷೇಧಿಸಲಾಗಿದೆ ಎಂದು ಫೇಸ್‌ಬುಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಅಮೆರಿಕ ಸರ್ಕಾರ ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಫೇಸ್‌ಬುಕ್‌ ಹೇಳಿದೆ.

ಫೇಸ್‌ಬುಕ್‌ ಕಂಪನಿಯ ನಿಯಮಗಳನ್ನು ಉಲ್ಲಂಘನೆ ಮಾಡಿರುವ 12 ಜನರ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಇವರು ಫೇಸ್‌ಬುಕ್‌ನಲ್ಲಿ ನಕಲಿ ಖಾತೆಗಳನ್ನು ತೆರೆದು ಕೋವಿಡ್‌ ಲಸಿಕೆ ಪಡೆಯುವ ಬಗ್ಗೆ ತಪ್ಪು ಸಂದೇಶ ರವಾನಿಸುತ್ತಿದ್ದರು ಎಂದು ಫೇಸ್‌ಬುಕ್‌ ಹೇಳಿದೆ.

ಈ ನಕಲಿ ಖಾತೆದಾರರಿಗೆ ಅಮೆರಿಕ ಸೇರಿದಂತೆ ಯುರೋಪ್‌ ಹಾಗೂ ಏಷ್ಯಾದ ವಿವಿಧ ದೇಶಗಳ ಫಾಲೋವರ್ಸ್‌ ಇದ್ದರು ಎಂದು ಅದು ತಿಳಿಸಿದೆ.

ಫೇಸ್‌ಬುಕ್‌ ಖಾತೆಯ ನಿಯಮಗಳನ್ನು ಉಲ್ಲಂಘನೆ ಮಾಡುವವರಿಗೆ ದಂಡ ಹಾಕುವ ಹಾಗೂ ಶಾಶ್ವತವಾಗಿ ಅವರಿಗೆ ಖಾತೆ ತೆರೆಯಲು ಅವಕಾಶ ನೀಡದಿರುವ ಕ್ರಮಗಳನ್ನು ಫೇಸ್‌ಬುಕ್‌ ಅನುಸರಿಸುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT