ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ ಉದ್ಯೋಗಿಗಳಿಗೆ 2021ರ ಜುಲೈವರೆಗೂ ಮನೆಯಿಂದಲೇ ಕೆಲಸ

Last Updated 7 ಆಗಸ್ಟ್ 2020, 5:47 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಅಮೆರಿಕ ಮೂಲದ ಬೃಹತ್‌ ಸಾಮಾಜಿಕ ಮಾಧ್ಯಮ ಕಂಪನಿ ಫೇಸ್‌ಬುಕ್‌ ತನ್ನ ಉದ್ಯೋಗಿಗಳಿಗೆ ಮುಂದಿನ ವರ್ಷ 2021ರ ಜುಲೈವರೆಗೂ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿದೆ.

ಫೇಸ್‌ಬುಕ್‌ ಕಂಪನಿಯ ವಕ್ತಾರರು ಇ–ಮೇಲ್‌ ಮೂಲಕ ಖಚಿತಪಡಿಸಿದ್ದಾರೆ. 2021ರ ಜುಲೈ 31ರವರೆಗೂ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಲಿದ್ದಾರೆ. ಉದ್ಯೋಗಿಗಳು ಮನೆಯಲ್ಲಿ ಕೆಲಸ ಮಾಡುವುದರಿಂದ ಕಚೇರಿ ಸೌಕರ್ಯದ ಅಗತ್ಯಗಳಿಗಾಗಿ ಹೆಚ್ಚುವರಿಯಾಗಿ ಒಂದು ಸಾವಿರ ಡಾಲರ್‌ (74 ಸಾವಿರ) ನೀಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.

ಕಳೆದ ವಾರ ಗೂಗಲ್‌ ಕಂಪೆನಿಯು ಕೂಡ ಮನೆಯಿಂದಲೇ ಕೆಲಸ ಮಾಡುವ ಅವಧಿಯನ್ನು 2021ರ ಜೂನ್‌ ವರೆಗೂ ವಿಸ್ತರಣೆ ಮಾಡಿದೆ. ಮತ್ತೊಂದು ಸಾಮಾಜಿಕ ಮಾಧ್ಯಮ ಟ್ವೀಟರ್‌ ಕೆಲವು ಉದ್ಯೋಗಿಗಳಿಗೆ ಮಾತ್ರ ಮನೆಯಿಂದಲೇ ಕೆಲಸ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.

ಸರ್ಕಾರದ ಮಾರ್ಗದರ್ಶನ ನಿಯಮಗಳು ಹಾಗೂ ವೈದ್ಯರ ಸಲಹೆಗಳನ್ನು ಪರಿಗಣಿಸಿ ಕಂಪನಿಯ ಕಾರ್ಯಕಾರಿ ಸಮಿತಿಯ ಸದಸ್ಯರೊಂದಿಗೆ ಚರ್ಚೆ ಮಾಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಫೇಸ್‌ಬುಕ್‌ ಹೇಳಿದೆ.

ಜಾಗತಿಕವಾಗಿ ಕಚೇರಿಗಳನ್ನು ತೆರೆಯಲಾಗುತ್ತಿದ್ದುಹೆಚ್ಚಿನ ಉದ್ಯೋಗಿಗಳು ಮನೆಯಿಂದಲೇ ಕಾರ್ಯಾಚರಣೆ ಮುಂದುವರಿಸಲಿದ್ದಾರೆ ಎಂದು ಫೇಸ್‌ಬುಕ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT