ವದಂತಿಗಳಿಂದ ಸೃಷ್ಟಿಯಾಗುವ ಆತಂಕ, ಅದರಿಂದ ಜನರು ಆತುರದಲ್ಲಿ ಮಾಡಿಕೊಳ್ಳುವ ಎಡವಟ್ಟುಗಳು ಒಂದೊಂದಲ್ಲ.

ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧದ ಹೊತ್ತಲ್ಲಿ ಭಾರತದಲ್ಲಿ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಅದರೆ, ಅದಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ಊಹಾಪೋಹಗಳಿಂದ ಜನರು, ಇನ್ನುಮುಂದೆ ತೈಲ ಸಿಗುವುದೇ ಇಲ್ಲವೇನೋ ಎಂಬಂತೆ ಕೆಲವೆಡೆ 'ರಿಯಾಕ್ಟ್' ಮಾಡುತ್ತಿದ್ದಾರೆ.

ಪೆಟ್ರೋಲ್, ಡೀಸೆಲ್ ಸಂಗ್ರಹಿಸಿಟ್ಟುಕೊಳ್ಳಲು ಮನೆಯಲ್ಲಿರುವ ಪಾತ್ರೆಗಳು, ನೀರಿನ ಟ್ಯಾಂಕರ್ಗಳು, ಬಕೆಟ್ಗಳನ್ನು ಹಿಡಿದು ಪೆಟ್ರೊಲ್ ಬಂಕ್ಗಳ ಎದುರು ಜಮಾಯಿಸಿರುವ ಚಿತ್ರಗಳು, ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಗುಜರಾತ್, ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದಲ್ಲಿ ಜನರು ಪೆಟ್ರೋಲ್ ಬಂಕ್ಗಳ ಎದುರು ಮುಗಿಬಿದ್ದಿರುವ ಪ್ರಕರಣಗಳು ವರದಿಯಾಗಿವೆ.

ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸುತ್ತಿರುವುದಾಗಿ ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಮೊಹಮ್ಮದ್ ಝುಬೈರ್, 'ಗುಜರಾತ್ನ ಕೆಲವು ಭಾಗಗಳಲ್ಲಿ ಜನರು ಪೆಟ್ರೋಲ್ ಮತ್ತು ಡೀಸೆಲ್ ಸಂಗ್ರಹಿಸಲು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್ಗಳು, ಬಕೆಟ್ ಸೇರಿದಂತೆ ಇತ್ಯಾದಿ ವಸ್ತುಗಳನ್ನು ಪೆಟ್ರೋಲ್ ಬಂಕ್ಗಳಿಗೆ ತರುತ್ತಿದ್ದಾರೆ' ಎಂದು ಹೇಳಿದ್ದಾರೆ.

ಏತನ್ಮಧ್ಯೆ, ಸರ್ಕಾರಿ ಸ್ವಾಮ್ಯದ ಭಾರತ್ ಪೆಟ್ರೋಲಿಯಂ ಬುಧವಾರ ಹೇಳಿಕೆ ಬಿಡುಗಡೆ ಮಾಡಿದೆ. 'ಪೆಟ್ರೋಲ್, ಡೀಸೆಲ್ ಕೊರತೆಯ ಬಗ್ಗೆ ಹರಿದಾಡುತ್ತಿರುವ ವದಂತಿಗಳು ಸಂಪೂರ್ಣವಾಗಿ ಆಧಾರರಹಿತವಾದವು. ದೇಶದಲ್ಲಿ ಸಾಕಷ್ಟು ಇಂಧನ ಲಭ್ಯವಿದೆ. ಪೂರೈಕೆ ಸರಪಳಿಯು, ಯಾವುದೇ ಅಡಚಣೆಯಿಲ್ಲದೆ ಸುಸೂತ್ರವಾಗಿ ಕಾರ್ಯನಿರ್ವಹಿಸುತ್ತಿದೆ' ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.