ಬುಧವಾರ, ಜೂನ್ 29, 2022
24 °C

ಐಟಿ ನಿಯಮ ಅನುಸರಣೆಗೆ ಕೇಂದ್ರದಿಂದ ಟ್ವಿಟರ್‌ಗೆ ಕೊನೆಯ ನೋಟಿಸ್

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಹೊಸ ಐಟಿ ನಿಯಮಗಳ ಅನುಸರಣೆಗೆ ಟ್ವಿಟರ್‌ಗೆ ಕೊನೆಯ ಅವಕಾಶ ನೀಡಿರುವ ಕೇಂದ್ರ ಸರ್ಕಾರ, ಶನಿವಾರದಂದು ನೋಟಿಸ್ ಜಾರಿಗೊಳಿಸಿದೆ.

ಹೊಸ ನಿಮಯಗಳನ್ನು ಪಾಲಿಸುವಲ್ಲಿ ವಿಫಲವಾದರೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಹೊಣೆಗಾರಿಕೆಯಿಂದ ವಿನಾಯಿತಿ ಕಳೆದುಕೊಳ್ಳಲಿದೆ ಎಂದು ಎಚ್ಚರಿಸಿದೆ.

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ (ಎಂಇಐಟಿವೈ) ನಿಮಯಗಳನ್ನು ಅನುಸರಿಸಲು ಟ್ವಿಟರ್ ನಿರಾಕರಿಸಿರುವುದು ಮೈಕ್ರೋಬ್ಲಾಗಿಂಗ್ ಸೈಟ್‌ನ ಬದ್ಧತೆಯ ಕೊರತೆಯಾಗಿದೆ. ಅಲ್ಲದೆ ಈ ವೇದಿಕೆಯಲ್ಲಿ ದೇಶದ ಜನರಿಗೆ ಸುರಕ್ಷಿತ ಅನುಭವ ನೀಡುವ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ ಎಂದು ಹೇಳಿದೆ.

ಇದನ್ನೂ ಓದಿ: 

ದಶಕದಿಂದಲೂ ಭಾರತದಲ್ಲಿ ಕಾರ್ಯಾಚರಿಸುತ್ತಿರುವ ಹೊರತಾಗಿಯೂ ದೇಶದ ಜನರಿಗೆ ಈ ವೇದಿಕೆಯಲ್ಲಿ ತಮ್ಮ ಸಮಸ್ಯೆಗಳನ್ನು ಸಮಯೋಚಿತವಾಗಿ ಪಾರದರ್ಶಕವಾಗಿ ಬಗೆಹರಿಸುವ ನಿಯಮವನ್ನು ಒಪ್ಪಿಕೊಳ್ಳಲು ಟ್ವಿಟರ್ ನಿರಾಕರಿಸಿದೆ ಎಂದು ಐಟಿ ಸಚಿವಾಲಯ ತಿಳಿಸಿದೆ.

ಹಾಗಿದ್ದರೂ ನೋಟಿಸ್‌ನಲ್ಲಿ ನಿಯಮ ಅನುಸರಿಸಲು ಯಾವುದೇ ನಿರ್ದಿಷ್ಟ ಗಡುವನ್ನು ನೀಡಲಾಗಿಲ್ಲ.

ಇವನ್ನೂ ಓದಿ: 
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು