ನವದೆಹಲಿ: ಕಾರ್ಯಕ್ಷಮತೆ ಆಧರಿಸಿ ಶೇಕಡ 5ರಷ್ಟು ಸಿಬ್ಬಂದಿಯನ್ನು ಕಡಿತಗೊಳಿಸುವುದಾಗಿ ಸಾಮಾಜಿಕ ಜಾಲತಾಣ ವೇದಿಕೆಗಳ ಮಾಲೀಕತ್ವದ ಸಂಸ್ಥೆ ‘ಮೆಟಾ’ ಅಧಿಸೂಚನೆ ಹೊರಡಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಡಿತಗೊಳಿಸಿದಷ್ಟೇ ಪ್ರಮಾಣದಲ್ಲಿ ಹೊಸ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದೂ ಮೆಟಾ ತಿಳಿಸಿದೆ.

ಸದ್ಯ ಮೆಟಾ ಕಂಪನಿಯಲ್ಲಿ 72,000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಈ ಪೈಕಿ ಶೇ 5ರಷ್ಟು ಸಿಬ್ಬಂದಿಯನ್ನು ಕಡಿತಗೊಳಿಸಿದರೆ, 3,600 ಉದ್ಯೋಗಗಳ ಮೇಲೆ ಪರಿಣಾಮ ಬೀರಲಿದೆ ಎಂದು ಅಂದಾಜಿಸಲಾಗಿದೆ.

‘ಕಾರ್ಯನಿರ್ವಹಣೆಯಲ್ಲಿ ದಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಡಿಮೆ ಕಾರ್ಯಕ್ಷಮತೆ ಹೊಂದಿರುವ ಸಿಬ್ಬಂದಿಯನ್ನು ಶೀಘ್ರವೇ ಕಡಿತಗೊಳಿಸಲು ನಿರ್ಧರಿಸಿದ್ದೇನೆ ಎಂದು ಮೆಟಾ ಕಂಪನಿ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಾರ್ಕ್ ಜುಕರ್ಬರ್ಗ್ ತಿಳಿಸಿರುವುದಾಗಿ ವರದಿಯಾಗಿದೆ.

‘ಒಂದು ವರ್ಷದ ಅವಧಿಯಲ್ಲಿ ನಿರೀಕ್ಷೆಗಳನ್ನು ಪೂರೈಸದ ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಲಾಗುವುದು. ಫೆಬ್ರುವರಿ ವೇಳೆ ಈ ಪ್ರಕ್ರಿಯೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಅಮೆರಿಕರದಲ್ಲಿರುವ ಸಿಬ್ಬಂದಿಗೆ ಫೆಬ್ರುವರಿ 10ರಂದು ತಿಳಿಸುವ ನಿರೀಕ್ಷೆ ಇದೆ. ಆದರೆ ಇತರ ದೇಶಗಳಲ್ಲಿ ನೆಲೆಸಿರುವ ಇತರೆ ಸಿಬ್ಬಂದಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು’ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ಜುಕರ್ಬರ್ಗ್ ಅವರು 2023ನೇ ವರ್ಷವನ್ನು ಕಂಪನಿಯ ‘ದಕ್ಷತೆಯ ವರ್ಷ’ ಎಂದು ಘೋಷಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ 10,000 ಸಿಬ್ಬಂದಿಯನ್ನು ಕಡಿತಗೊಳಿಸುವುದಾಗಿ ಪ್ರಕಟಿಸಿದ್ದರು. ಮಂಗಳವಾರ ಮೆಟಾ ಷೇರುಗಳು ಶೇಕಡ 2.1ರಷ್ಟು ಕುಸಿದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.