ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಗೆ ಪ್ರತ್ಯುತ್ತರವಾಗಿ ಭಾರತವು ಪಾಕಿಸ್ತಾನದ ಜೊತೆಗಿನ ರಾಜತಾಂತ್ರಿಕ ಸಂಬಂಧಗಳನ್ನು ಕಡೆದುಕೊಂಡಿದೆ.

ಪ್ರಮುಖ ಐದಾರು ತೀರ್ಮಾನಗಳನ್ನು ತೆಗೆದುಕೊಂಡು ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸಿದೆ. ಅಷ್ಟೇ ಅಲ್ಲದೇ ಪಾಕಿಸ್ತಾನ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ವಿಷಯದಲ್ಲಿ ಭಾರತವನ್ನು ಕೆಣಕಿ ತನ್ನ ಎಕ್ಸ್ನಲ್ಲಿ ಪೋಸ್ಟ್ಗಳನ್ನು ಹಂಚಿಕೊಳ್ಳುತ್ತಿತ್ತು.

ಇದೀಗ ಭಾರತ ಸರ್ಕಾರವು ಭಾರತದಲ್ಲಿ ಚಾಲ್ತಿಯಲ್ಲಿದ್ದ ಪಾಕಿಸ್ತಾನ್ ಸರ್ಕಾರದ ಅಧಿಕೃತ ಎಕ್ಸ್ ಖಾತೆಯನ್ನೇ ಸ್ಥಗಿತಗೊಳಿಸಿದೆ. ಇದೇ ರೀತಿ ಫೇಸ್ಬುಕ್ ಸೇರಿದಂತೆ ಎಲ್ಲ ಸೋಶಿಯಲ್ ಮೀಡಿಯಾಗಳಲ್ಲಿನ ಪಾಕ್ ಸರ್ಕಾರದ ಅಧಿಕೃತ ಖಾತೆಗಳನ್ನು ರದ್ದುಗೊಳಿಸಲಾಗಿದೆ.

ಈ ಮೂಲಕ ಪಾಕಿಸ್ತಾನ ಭಾರತದಲ್ಲಿ ತನ್ನ ಸಂವಹನ ಮಾಧ್ಯಮವಾಗಿ ಬಳಸುತ್ತಿದ್ದ Government Of Pakistan ಎಂಬ ಖಾತೆಯನ್ನು ಭಾರತದಲ್ಲಿ ಬಳಕೆಯಾಗದಂತೆ ತಡೆಹಿಡಿದಿದೆ.

ಪಾಕಿಸ್ತಾನದ ಜೊತೆಗಿನ ರಾಜತಾಂತ್ರಿಕ ಸಂಬಂಧವನ್ನು ಕಡಿಮೆ ಮಾಡಲು ತೀರ್ಮಾನಿಸಿರುವ ಕೇಂದ್ರ ಸರ್ಕಾರವು, ಭಾರತದಲ್ಲಿ ಇರುವ ಪಾಕಿಸ್ತಾನದ ದೂತಾವಾಸ ಕಚೇರಿಗಳಲ್ಲಿನ ಮಿಲಿಟರಿ ರಾಜತಾಂತ್ರಿಕರನ್ನು ದೇಶದಿಂದ ಹೊರಗೆ ಕಳುಹಿಸಲು ತೀರ್ಮಾನಿಸಿದೆ.

ಪ್ರಧಾನಿ ಮೋದಿ ನೇತೃತ್ವದಲ್ಲಿ ನವದೆಹಲಿ ಯಲ್ಲಿ ಬುಧವಾರ ಸಂಜೆ ನಡೆದ ‘ಭದ್ರತೆ ಕುರಿತ ಸಚಿವ ಸಂಪುಟ’ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪಟ್ಟಣ ಸಮೀಪದ ಹುಲ್ಲುಗಾವಲಿನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 28 ಮಂದಿ ಮೃತಪಟ್ಟು, ಕನಿಷ್ಠ 20 ಜನರು ಗಾಯಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.