ಸೋಮವಾರ, ಏಪ್ರಿಲ್ 6, 2020
19 °C

ಸಾಮಾಜಿಕ ಮಾಧ್ಯಮ ಖಾತೆ ಬಗ್ಗೆ ಪ್ರಧಾನಿ ಮೋದಿ ಹೇಳಿದ ರಹಸ್ಯ ಬಯಲು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Narendra Modi

ನವದೆಹಲಿ: ಸಾಮಾಜಿಕ ಜಾಲತಾಣಗಳಿಗೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ರಾತ್ರಿ ಮಾಡಿದ್ದ ಟ್ವೀಟ್‌ನ ರಹಸ್ಯ ಬಯಲಾಗಿದೆ.

ಈ ಕುರಿತು ಅವರೇ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ‘ನಮಗೆ ಸ್ಫೂರ್ತಿ ನೀಡುವಂತೆ ಬಾಳಿದ ಮತ್ತು ಕೆಲಸ ಮಾಡಿದ ಮಹಿಳೆಯರಿಗಾಗಿ ಈ ಬಾರಿಯ ಮಹಿಳಾ ದಿನಾಚರಣೆಯಂದು ನನ್ನ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮೀಸಲಿಡುತ್ತಿದ್ದೇನೆ’ ಎಂದು ಉಲ್ಲೇಖಿಸಿದ್ದಾರೆ.

‘ನೀವು ಅಂತಹ ಮಹಿಳೆಯೇ ಅಥವಾ ಅಂಥ ಸ್ಫೂರ್ತಿದಾಯಕ ಮಹಿಳೆಯರ ಬಗ್ಗೆ ನಿಮಗೆ ಗೊತ್ತೇ? ಅವರ ಕಥೆಗಳನ್ನು #SheInspiresUs ಹ್ಯಾಷ್‌ಟ್ಯಾಗ್‌ ಅಡಿಯಲ್ಲಿ ಹಂಚಿಕೊಳ್ಳಿ’ ಎಂದು ಮೋದಿ ಮನವಿ ಮಾಡಿದ್ದಾರೆ.

ಸಾಧಕ ಮಹಿಳೆಯರ ಕಥೆಗಳನ್ನು ವಿಡಿಯೊ ಮೂಲಕವೂ ಫೇಸ್‌ಬುಕ್, ಟ್ವಿಟರ್, ಇನ್‌ಸ್ಟಾಗ್ರಾಂ, ಯೂಟ್ಯೂಬ್‌ನಲ್ಲಿ ಶೇರ್ ಮಾಡಬಹುದು ಎಂದು ಮೋದಿ ಹೇಳಿದ್ದಾರೆ.

ಇನ್ನಷ್ಟು...

ಸಾಮಾಜಿಕ ಮಾಧ್ಯಮಗಳಿಂದ ದೂರ ಉಳಿಯಲಿದ್ದಾರೆ ಪ್ರಧಾನಿ ನರೇಂದ್ರ ಮೋದಿ?

ದ್ವೇಷ ಬಿಡಿ, ಸಾಮಾಜಿಕ ಮಾಧ್ಯಮಗಳನ್ನಲ್ಲ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು