ಮಂಗಳವಾರ, 25 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ನಾತಕೋತ್ತರ ಪದವಿ ಪೂರೈಸಿದ ಸಾರಾ: ಸಂತಸ ಹಂಚಿಕೊಂಡ ಸಚಿನ್ ತೆಂಡೂಲ್ಕರ್

ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರು ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ.
Published 24 ಮೇ 2024, 14:47 IST
Last Updated 24 ಮೇ 2024, 14:47 IST
ಅಕ್ಷರ ಗಾತ್ರ

ಬೆಂಗಳೂರು: ಖ್ಯಾತ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರು ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ.

ಲಂಡನ್‌ನ ಲಂಡನ್ಸ್‌ ಗ್ಲೋಬಲ್ ಯುನಿವರ್ಸಿಟಿಯಿಂದ ಮೆಡಿಸಿನ್ ವಿಭಾಗದ ಕ್ಲಿನಿಕಲ್ ಆ್ಯಂಡ್ ಪಬ್ಲಿಕ್ ಹೆಲ್ತ್ ನ್ಯೂಟ್ರಿಷನ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಮಾಣ ಪತ್ರ ಸ್ವೀಕರಿಸಿದ್ದಾರೆ.

ಈ ವಿಷಯವನ್ನು ಎಕ್ಸ್‌ನಲ್ಲಿ ಹಂಚಿಕೊಂಡು ಟ್ವೀಟ್ ಮಾಡಿರುವ ಸಚಿನ್ ತೆಂಡೂಲ್ಕರ್ ಅವರು, ‘ಇದು ಸುಂದರವಾದ ದಿನ. ನೀನು ಇಂದು ಪದವಿ ಪೂರೈಸಿ ಹೊರಬರಲು ಪಟ್ಟಿರುವ ಎಲ್ಲ ಶ್ರಮಗಳನ್ನು ನೋಡಿದ್ದೇವೆ. ಪೋಷಕರಾಗಿ ನಾವು ಅದನ್ನು ಮೆಚ್ಚಿಕೊಳ್ಳುತ್ತೇವೆ. ಇಲ್ಲಿಂದ ನಿನ್ನ ಎಲ್ಲಾ ಕನಸುಗಳು ತೆರೆದುಕೊಳ್ಳುತ್ತವೆ‘ ಎಂದು ಶುಭ ಹಾರೈಸಿದ್ದಾರೆ.

ಸ್ನಾತಕೋತ್ತರ ಪದವಿ ಅಧ್ಯಯನದ ಜೊತೆ ಸಾರಾ ಅವರು ಮಾಡಲಿಂಗ್ ಹಾಗೂ ಜಾಹೀರಾತುಗಳಲ್ಲಿ ತೊಡಗಿಸಿಕೊಂಡಿದ್ದರು. ಇನ್ನು ಮುಂದೆ ಅವರು ಪೃವೃತ್ತಿಯ ಜೊತೆ ವೈದ್ಯಕೀಯ ವೃತ್ತಿಯನ್ನು ಮುಂದುವರೆಸಲಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT