ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮಾಜಿಕ ಜಾಲತಾಣಗಳಿಗೆ ಕೇಂದ್ರ ಎಚ್ಚರಿಕೆ

Last Updated 11 ಫೆಬ್ರವರಿ 2021, 16:43 IST
ಅಕ್ಷರ ಗಾತ್ರ

ನವದೆಹಲಿ: ಖಾತೆಗಳನ್ನು ಬ್ಲಾಕ್ ಮಾಡುವುದರ ಕುರಿತು ಟ್ವಿಟರ್‌ ಮತ್ತು ಸರ್ಕಾರದ ನಡುವೆ ಜಟಾಪಟಿ ಮುಂದುವರಿದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ರವಿಶಂಕರ ಪ್ರಸಾದ್ ಅವರು, ‘ಸಾಮಾಜಿಕ ಜಾಲತಾಣಗಳು ಈ ನೆಲದ ಕಾನೂನಿಗೆ ಬದ್ಧವಾಗಿರುವುದು ಕಡ್ಡಾಯ. ಇಲ್ಲದಿದ್ದರೆ ಕಟ್ಟುನಿಟ್ಟಿನ ಕ್ರಮಜರುಗಿಸಲಾಗು ವುದು’ ಎಂದು ಎಚ್ಚರಿಸಿದ್ದಾರೆ.

ನಾವು ಸಾಮಾಜಿಕ ಜಾಲತಾಣವನ್ನು ಗೌರವಿಸುತ್ತೇವೆ. ಇದು, ಜನರನ್ನು ಸಬಲೀಕರಣಗೊಳಿಸಿದೆ. ಆದರೆ, ಸಾಮಾಜಿಕ ಜಾಲತಾಣವನ್ನು ಸುಳ್ಳು ಸುದ್ದಿಗಳ ಪ್ರಚಾರ, ಹಿಂಸೆ ಹೆಚ್ಚಲು ಬಳಸಲಾಗುತ್ತಿದೆ. ಇಂಥ ಸಂದರ್ಭಗಳಲ್ಲಿ ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.

ಟ್ವಿಟರ್ ವಿರುದ್ಧ ಹರಿಹಾಯ್ದ ಅವರು, ಆಡಳಿತ ಮಂಡಳಿಯು ಹಿಂಸೆಯನ್ನು ಖಂಡಿಸುವ ವಿಷಯದಲ್ಲಿ ದ್ವಿಮುಖ ನೀತಿಯನ್ನು ಹೊಂದಿದೆ ಎಂದು ಟೀಕಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT