ಶನಿವಾರ, ಜನವರಿ 16, 2021
22 °C
#StopHindiImposition ಟ್ರೆಂಡಿಂಗ್‌

ನಿವಾರ್ ಚಂಡಮಾರುತ: ಹಿಂದಿಯಲ್ಲಿ ಮಾಹಿತಿ ನೀಡಿದ ಹವಾಮಾನ ಇಲಾಖೆ ವಿರುದ್ಧ ಆಕ್ರೋಶ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಚೆನ್ನೈ: ನಿವಾರ್ ಚಂಡಮಾರುತದ ಬಗೆಗಿನ ಮಾಹಿತಿಯನ್ನು ಹಿಂದಿಯಲ್ಲಿ ಟ್ವೀಟ್‌ ಮಾಡಿರುವ ಕೇಂದ್ರ ಹವಾಮಾನ ಇಲಾಖೆ ವಿರುದ್ಧ ದಕ್ಷಿಣ ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಗಾಳ ಕೊಲ್ಲಿಯ ನೈರುತ್ಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಮಂಗಳವಾರ ಚಂಡಮಾರುತದ ಸ್ವರೂಪ ಪಡೆದಿದೆ. 130-140 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು ಬುಧವಾರದ ಸಂಜೆ ಅಥವಾ ಗುರುವಾರ ಬೆಳಗ್ಗೆ ನಿವಾರ್‌ ಚಂಡಮಾರುತ ಚೆನ್ನೈ ಮತ್ತು ಪುದುಚೇರಿಯನ್ನು ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಮಾಹಿತಿಯನ್ನು ನೀಡಿರುವ ಹವಾಮಾನ ಇಲಾಖೆಯು ಹಿಂದಿ ಭಾಷೆಯಲ್ಲಿ ಟ್ವೀಟ್‌ ಮಾಡಿದೆ. ಇದು ಹಿಂದಿ ಭಾಷಿಗರಲ್ಲದ ದಕ್ಷಿಣ ಭಾರತೀಯರನ್ನು ಕೆರಳಿಸಿದೆ.

#StopHindiImposition ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಟ್ವೀಟ್‌ ಮಾಡಿರುವ ನೆಟ್ಟಿಗರು 'ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ. ಈ ರೀತಿಯಾಗಿ ಹಿಂದಿಯನ್ನು ನಮ್ಮ ಮೇಲೆ ಹೇರಬೇಡಿ. ನೀವು ತಮಿಳು ಅಥವಾ ಇಂಗ್ಲಿಷ್‌ನಲ್ಲಿ ಟ್ವೀಟ್‌ ಮಾಡಿ' ಎಂದು ಹೇಳಿದ್ದಾರೆ.

 

 

 

#StopHindiImposation ಹ್ಯಾಶ್‌ಟ್ಯಾಗ್‌ ಹೊಂದಿರುವ ಕೆಲ ಟ್ವೀಟ್‌ಗಳು ಇಲ್ಲಿವೆ...

 

 

 

 

 

 

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು