ನವದೆಹಲಿ: ಭಾರತದ ತಪ್ಪಾದ ಭೂಪಟವನ್ನು ಪ್ರಕಟಿಸಿದ್ದ ಸಾಮಾಜಿಕ ಜಾಲತಾಣ ಸಂಸ್ಥೆ ಟ್ವಿಟರ್ನ ಭಾರತದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಪ್ರಕರಣ ದಾಖಲಾಗಿದೆ.

ಐಪಿಸಿ ಸೆಕ್ಷನ್ 505 (2) ಮತ್ತು ಐಟಿ (ತಿದ್ದುಪಡಿ) ಕಾಯ್ದೆ 2008 ರ ಸೆಕ್ಷನ್ 74 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಬುಲಂದ್ಶಹರ್ನಲ್ಲಿರುವ ಭಜರಂಗದಳದ ಮುಖಂಡರ ದೂರಿನ ಮೇರೆಗೆ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟ್ವಿಟರ್ನಲ್ಲಿ ಪ್ರಕಟಿಸಿದ್ದ ತಪ್ಪಾದ ಭಾರತದ ಭೂಪಟದಲ್ಲಿ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತ್ಯೇಕ ದೇಶಗಳು ಎಂದು ತೋರಿಸುತ್ತಿದ್ದರಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಟ್ವಿಟರ್ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಟ್ವಿಟ್ಟರ್ ಸಂಸ್ಥೆ ವಿರುದ್ಧ ಕ್ರಮಕ್ಕೆ ಒತ್ತಾಯ ಕೇಳಿಬಂದಿತ್ತು. ಬಳಿಕ ಟ್ವಿಟರ್ ಈ ತಪ್ಪಾದ ಭೂಪಟವನ್ನು ತೆಗೆದುಹಾಕಿತ್ತು.

ಇದನ್ನೂ ಓದಿ.. ಟ್ವಿಟರ್ ವಿರುದ್ಧ ಆಕ್ರೋಶ; ತಪ್ಪಾದ ಭಾರತದ ಭೂಪಟ ತೆಗೆದು ಹಾಕಿದ ಸಂಸ್ಥೆ

ಈ ಕುರಿತಂತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಧಿಕಾರಿಗಳು ಸಹ ಟ್ವಿಟರ್ ಸಂಸ್ಥೆಗೆ ವಿವರಣೆ ಕೋರಿ ನೋಟಿಸ್ ನೀಡಲು ನಿರ್ಧರಿಸಿರುವುದಾಗಿ ತಿಳಿಸಿದೆ.

ಟ್ವಿಟರ್, ಭಾರತದ ನಕ್ಷೆಯನ್ನು ತಪ್ಪಾಗಿ ತೋರಿಸುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ ಲೇಹ್ ಅನ್ನು ಚೀನಾದ ಭಾಗವೆಂದು ತೋರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.