ಶನಿವಾರ, ಅಕ್ಟೋಬರ್ 24, 2020
28 °C

ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಟ್ವಿಟರ್ ಖಾತೆ ಸ್ಥಗಿತ : ಟ್ರಂಪ್

ಪಿಟಿಐ Updated:

ಅಕ್ಷರ ಗಾತ್ರ : | |

ಟ್ವಿಟರ್– ಸಾಂದರ್ಭಿಕ ಚಿತ್ರ

ವಾಷಿಂಗ್ಟನ್‌: ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಜೊ ಬೈಡೆನ್‌ ಪುತ್ರನ ವಿರುದ್ಧದ ಭ್ರಷ್ಟಾಚಾರ ಆರೋಪ ಕುರಿತ ವರದಿಯನ್ನು ಹಂಚಿಕೊಂಡಿದ್ದಕ್ಕಾಗಿ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕೆಲೀಗ್ ಮೆಕ್ನಾನಿ ಅವರ ವೈಯಕ್ತಿಕ ಖಾತೆಯನ್ನು ಟ್ವಿಟರ್‌ ಲಾಕ್‌ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

‘ಜೊ ಬೈಡನ್ ಪುತ್ರ ಹಂಟರ್‌ ಬೈಡನ್‌ ತನ್ನ ತಂದೆಯ ಅಧಿಕಾರ ಬಳಸಿಕೊಂಡು, ಉಕ್ರೇನಿಯನ್‌ ಕಂಪನಿಯೊಂದಿಗೆ ಅಕ್ರಮ ಹಣದ ವ್ಯವಹಾರ ನಡೆಸಿದ್ದಾರೆ ಎಂದು ವರದಿಯೊಂದು ನ್ಯೂಯಾರ್ಕ್‌ ಪೋಸ್ಟ್‌ನಲ್ಲಿ ಪ್ರಕಟವಾಗಿತ್ತು. ಈ ವರದಿಯನ್ನು ಉಲ್ಲೇಖಿಸಿ ಟ್ರಂಪ್ ಹಾಗೂ ಅವರ ಬೆಂಬಲಿಗರು ಆರೋಪಿಸಿದ್ದರು. 

‘ಡೆಮಾಕ್ರಟಿಕ್ ಪಕ್ಷದವರು ಇಷ್ಟಪಡದಂತಹ ವರದಿಯನ್ನು ಹಂಚಿಕೊಂಡಿದ್ದಕ್ಕಾಗಿ ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಕೆಲೀಗ್ ಮೆಕ್ನಾನಿ ಅವರ ವೈಯಕ್ತಿಕ ಖಾತೆಯನ್ನು ಟ್ವಿಟರ್‌ ಲಾಕ್‌ ಮಾಡಿದೆ’ ಎಂದು ಟ್ರಂಪ್ ಚುನಾವಣಾ ಪ್ರಚಾರದ ತಂಡ ಟ್ವೀಟ್ ಮಾಡಿದೆ.

ಐಒವಾ ರಾಜ್ಯದಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡಿದ ಟ್ರಂಪ್‌, ‘ಕೆಲೀಗ್ ಮೆಕ್ನಾನಿ, ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ. ಹಾಗಾಗಿ, ಸತ್ಯದ ವರದಿಯನ್ನು ಹಂಚಿಕೊಂಡಿದ್ದಾರೆ. ಇದಕ್ಕಾಗಿ ಟ್ವಿಟರ್ ಆಕೆಯ ವೈಯಕ್ತಿಕ ಖಾತೆಯನ್ನೇ ಸ್ಥಗಿತಗೊಳಿಸಿದೆ’ ಎಂದು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು