ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ ನೋಡಿ: ಮುಂಬೈ ಬೀದಿಗಳಲ್ಲಿ ಕೊಹ್ಲಿ-ಅನುಷ್ಕಾ ಸ್ಕೂಟರ್ ಸವಾರಿ

Last Updated 21 ಆಗಸ್ಟ್ 2022, 10:39 IST
ಅಕ್ಷರ ಗಾತ್ರ

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕವಿರಾಟ್ ಕೊಹ್ಲಿ ತಮ್ಮ ಪತ್ನಿ ಅನುಷ್ಕಾ ಶರ್ಮಾ ಅವರೊಂದಿಗೆ ಮುಂಬೈ ರಸ್ತೆಗಳಲ್ಲಿ ಸ್ಕೂಟರ್‌ನಲ್ಲಿ ಸವಾರಿ ಮಾಡಿದ್ದಾರೆ.

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಸದ್ಯ ಕುಟುಂಬದವರ ಜೊತೆ ಕಾಲ ಕಳೆಯುತ್ತಿರುವ ವಿರಾಟ್‌ ಕೊಹ್ಲಿ ಅವರು ಇತ್ತೀಚೆಗೆಜಾಹೀರಾತು ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಶೂಟಿಂಗ್‌ ಮುಗಿದ ಬಳಿಕ ಅನುಷ್ಕಾ ಜೊತೆ ಸ್ಕೂಟರ್‌ ಸವಾರಿ ಮಾಡಿದ್ದಾರೆ. ಈ ವಿಡಿಯೊಗೆ ‘ವಿರೂಷ್ಕಾ‘ (ವಿರಾಟ್‌, ಅನುಷ್ಕಾ) ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿ ಕಮೆಂಟ್‌ ಮಾಡುತ್ತಿದ್ದಾರೆ.

ಇವರು ಮುಂಬೈನಮಡ್ ಐಲ್ಯಾಂಡ್‌ನ ರಸ್ತೆಗಳಲ್ಲಿ ಕಾಣಿಸಿಕೊಂಡರು. ಇಬ್ಬರೂಹೆಲ್ಮೆಟ್ ಧರಿಸಿ ಕಪ್ಪು ಸ್ಕೂಟರ್ ಮೇಲೆ ಸವಾರಿ ಮಾಡಿದರು. ಈ ವೇಳೆ ಅವರು ಮಾಧ್ಯಮಗಳಿಂದ ಮರೆಮಾಚಲು ಯತ್ನಿಸಿದರಾದರೂ ಯಾವುದೇ ಪ್ರಯೋಜನಗಳಾಗಲಿಲ್ಲ. ಅಂತಿಮವಾಗಿ ಕ್ಯಾಮೆರಾ ಕಣ್ಣಿಗೆ ಬಿದ್ದರು.

ಕೋಟಿ ಕೋಟಿ ರೂಪಾಯಿಗಳ ಒಡೆಯ ವಿರಾಟ್‌ ಸ್ಕೂಟರ್‌ ಓಡಿಸುತ್ತಿದ್ದರೇ ಅನುಷ್ಕಾ ಅವರ ಹಿಂದೆ ಕುಳಿತಿದ್ದರು. ಈ ವಿಡಿಯೊ ನೋಡಿದ ಅಭಿಮಾನಿಗಳು ಕೂಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT