ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಟ್ಸಾಪ್‌ ಡೌನ್‌: ಸಂದೇಶ ರವಾನಿಸಲಾಗದೆ ಪರದಾಡುತ್ತಿರುವ ಬಳಕೆದಾರರು

Last Updated 25 ಅಕ್ಟೋಬರ್ 2022, 7:57 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದ ಹಲವೆಡೆ ವಾಟ್ಸಾಪ್‌ ಬಳಕೆದಾರರು ಸಂದೇಶ ರವಾನಿಸಲು ಹಾಗೂ ಸ್ವೀಕರಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ. ಮಧ್ಯಾಹ್ನ 12.30ರಿಂದ ಈ ಲೋಪ ಕಂಡುಬಂದಿದೆ.

ವಾಟ್ಸಾಪ್‌ ಮೊಬೈಲ್‌ ಅಪ್ಲಿಕೇಷನ್‌ ಮತ್ತು ವೆಬ್‌ ಅಪ್ಲಿಕೇಷನ್‌ ಎರಡೂ ಕಾರ್ಯಚರಣೆ ಸ್ಥಗಿತಗೊಂಡಿದೆ. ವಾಟ್ಸಾಪ್‌ ಆಡಿಯೊ ಮತ್ತು ವಿಡಿಯೊ ಕಾಲ್‌ ಸೇವೆಯೂ ಕಾರ್ಯ ನಿರ್ವಹಿಸುತ್ತಿಲ್ಲ. ಈ ಬಗ್ಗೆ ವಾಟ್ಸಾಪ್‌ ಕಡೆಯಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ.

ವಾಟ್ಸಾಪ್‌ ತೆರೆಯಲು ಸಾಧ್ಯವಾಗುತ್ತಿದೆ. ಆದರೆ ಸಂದೇಶಗಳನ್ನು ಕಳುಹಿಸಲು ಮತ್ತು ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಬಳಕೆದಾರರು ದೂರಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಶೇ 69ರಷ್ಟು ಬಳಕೆದಾರರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಶೇ 21ರಷ್ಟು ಬಳಕೆದಾರರಿಗೆ ಸರ್ವರ್‌ ಸಂಪರ್ಕ ಸಿಗುತ್ತಿಲ್ಲ. ಶೇ 9ರಷ್ಟು ಮಂದಿ ತಮ್ಮ ಸ್ಮಾರ್ಟ್‌ ಫೋನ್‌ ಆ್ಯಪ್‌ಗಳಲ್ಲಿ ಗುರುತಿಸಲಾಗದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದಿದೆ.

ಟ್ವೀಟರ್‌ ಸೇರಿದಂತೆ ಇತರ ಸಾಮಾಜಿಕ ಜಾಲತಾಣಗಳಲ್ಲಿ ವಾಟ್ಸಾಪ್‌ ಡೌನ್‌ ಹ್ಯಾಶ್‌ ಟ್ಯಾಗ್‌ ಟ್ರೆಂಡ್‌ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT