ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

WhatsApp Down : ವಾಟ್ಸ್‌ಆ್ಯಪ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಕೆಲಕಾಲ ಸ್ಥಗಿತ

Last Updated 20 ಮಾರ್ಚ್ 2021, 8:40 IST
ಅಕ್ಷರ ಗಾತ್ರ

ನವದಹಲಿ: ಸಾಮಾಜಿಕ ಮಾಧ್ಯಮಗಳಾದ ಫೇಸ್‌ಬುಕ್, ವಾಟ್ಸ್‌ಆ್ಯಪ್ ಹಾಗೂ ಇನ್‌ಸ್ಟಾಗ್ರಾಂನಲ್ಲಿ ಶುಕ್ರವಾರ ರಾತ್ರಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದ ಪರಿಣಾಮ ಲಕ್ಷಾಂತರ ಮಂದಿ ಬಳಕೆದಾರರು ತೊಂದರೆಯನ್ನು ಎದುರಿಸಿದರು. ಬಳಿಕ ತಾಂತ್ರಿಕ ದೋಷವನ್ನು ಬಗೆಹರಿಸಲಾಗಿದೆ ಎಂದು ಫೇಸ್‌ಬುಕ್ ತಿಳಿಸಿದೆ.

ಭಾರತ ಸೇರಿದಂತೆ ವಿಶ್ವದಾದ್ಯಂತ ಬಳಕೆದಾರರು ಸಮಸ್ಯೆಯನ್ನು ಎದುರಿಸಿದ್ದರು. ಆಂಡ್ರಾಯ್ಡ್ ಹಾಗೂ ಐಒಎಸ್ ಬಳಕೆದಾರರನ್ನು ಸಮಸ್ಯೆ ಕಾಡಿತ್ತು.

ಮೆಸೇಜಿಂಗ್ ಫ್ಲ್ಯಾಟ್‌ಫಾರ್ಮ್ ವಾಟ್ಸ್‌ಆ್ಯಪ್ ಮೇಲೂ ಪರಿಣಾಮ ಬೀರಿತ್ತು. ಹಲವಾರು ಬಳಕೆದಾರರಿಗೆ ಸಂದೇಶವನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗಲಿಲ್ಲ. ರಿಫ್ರೆಶ್ ಸಮಸ್ಯೆಯನ್ನು ಎದುರಿಸಿದ್ದರು. ಈ ಬಗ್ಗೆ ಬಳಕೆದಾರರು ಟ್ವೀಟ್ ಮಾಡಿದರು. ಇದರಿಂದಾಗಿ ಮೈಕ್ರೋಬ್ಲಾಗಿಂಗ್ ಜಾಲತಾಣ ಟ್ವಿಟರ್‌ನಲ್ಲಿ #whatsappoutage #whatsappdown ಎಂಬ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡ್ ಆದವು.

ಇದಕ್ಕೆ ಸಮಾನವಾಗಿ #instagramdown ಮತ್ತು #facebookdown ಹ್ಯಾಶ್‌ಟ್ಯಾಗ್‌ಗಳ ಮೂಲಕ ಬಳಕೆದಾರರು ತಮ್ಮ ಸಮಸ್ಯೆಯನ್ನು ತೆೋಡಿಕೊಂಡರು.

ತಾಂತ್ರಿಕ ದೋಷ ಎದುರಾಗಿದ್ದು, ಅದನ್ನು ಪರಿಹರಿಸಲಾಗಿದೆ ಎಂದು ಫೇಸ್‌ಬುಕ್ ವಕ್ತಾರರು ತಿಳಿಸಿದ್ದಾರೆ.

ಈ ಸಮಸ್ಯೆಯು ರಾತ್ರಿ ಸುಮಾರು 11ರ ಹೊತ್ತಿಗೆ ಕಾಣಿಸಿಕೊಂಡಿದೆ. ಇನ್‌ಸ್ಟಾಗ್ರಾಂನಲ್ಲಿ ದಶಲಕ್ಷಕ್ಕೂ ಹೆಚ್ಚು ಮಂದಿ ಮತ್ತು ವಾಟ್ಸ್‌ಆ್ಯಪ್‌ನಲ್ಲಿ 20,000 ಬಳಕೆದಾರರು ಸಮಸ್ಯೆಯನ್ನು ಎದುರಿಸಿದ್ದಾರೆ ಎಂದು ಡೌನ್‌ಡಿಟೆಕ್ಟರ್ ಡಾಟ್ ಕಾಮ್ ವೆಬ್‌ಸೈಟ್ ವರದಿ ಮಾಡಿವೆ.

ಡೌನ್‌ಡಿಟೆಕ್ಟರ್ ವೆಬ್‌ಸೈಟ್, ಬಳಕೆದಾರರು ಒಳಗೊಂಡಂತೆ ವಿವಿಧ ಮೂಲಗಳಿಂದ ಮಾಹಿತಿಗಳನ್ನು ಸಂಗ್ರಹಿಸುತ್ತದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT