ಬುಧವಾರ, 29 ನವೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಬಿಎಂ ಸಿಇಒ ಆಗಿ ಭಾರತೀಯ ಮೂಲದ ಅರವಿಂದ ಕೃಷ್ಣ ಆಯ್ಕೆ

Last Updated 31 ಜನವರಿ 2020, 4:28 IST
ಅಕ್ಷರ ಗಾತ್ರ

ನ್ಯೂಯಾರ್ಕ್‌: ಅಮೆರಿಕದ ಹೆಸರಾಂತ ಮಾಹಿತಿ ತಂತ್ರಜ್ಞಾನ ಸಂಸ್ಥೆ ಐಬಿಎಂಗೆ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(ಸಿಇಒ) ಆಗಿ ಭಾರತೀಯ ಮೂಲದ ಅರವಿಂದ ಕೃಷ್ಣ ಆಯ್ಕೆಯಾಗಿದ್ದಾರೆ.

57 ವರ್ಷದ ಅರವಿಂದ ಕೃಷ್ಣ ಅವರು ಪ್ರಸ್ತುತ ಐಬಿಎಂ ಕಂಪನಿಯ ಕ್ಲೌಡ್ ಮತ್ತು ಕಾಗ್ನಿಟಿವ್ ಸಾಫ್ಟ್‌ವೇರ್‌ನ ಹಿರಿಯ ಉಪಾಧ್ಯಕ್ಷರಾಗಿದ್ದು, ಏಪ್ರಿಲ್‌ 6ರಿಂದ ಸಿಇಒ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಅರವಿಂದ ಕೃಷ್ಣ ಅವರು ಕಾನ್ಪುರದ ಐಐಟಿಯಲ್ಲಿ ಪದವಿಪೂರ್ವ ಶಿಕ್ಷಣ ಮತ್ತು ಇಲಿನಾಯ್ಸ್ ವಿಶ್ವವಿದ್ಯಾಲಯದಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT