ನವದೆಹಲಿ: ಪ್ಲಾಸ್ಮಾ ಚಿಕಿತ್ಸೆ ಅಗತ್ಯ ಇರುವ ರೋಗಿಗಳನ್ನು ಗಮನದಲ್ಲಿಟ್ಟುಕೊಂಡು ಏಮ್ಸ್‌ನವೈದ್ಯರು ಐಐಟಿ ದೆಹಲಿಯ ವಿದ್ಯಾರ್ಥಿಗಳೊಂದಿಗೆ ಸೇರಿ ಮೊಬೈಲ್ ಆ್ಯಪ್‌ವೊಂದನ್ನು ಅಭಿವೃದ್ಧಿಪಡಿಸಿದ್ದು, ಬುಧವಾರ ವೈದ್ಯರ ದಿನದಂದೇ ಅದನ್ನು ಬಿಡುಗಡೆ ಮಾಡಿದ್ದಾರೆ.

ಕೋಪಾಲ್–19 ಹೆಸರಿನ ಈ ಆ್ಯಪ್‌ನ ಮೂಲಕ ಆಸ್ಪತ್ರೆಯಲ್ಲಿ ದಾಖಲಾದ ಕೋವಿಡ್ 19 ರೋಗಿಗಳನ್ನು ಪತ್ತೆ ಹಚ್ಚಲಾಗುತ್ತದೆ. ಅವರು ಆಸ್ಪತ್ರೆಯಿಂದ ಬಿಡುಗಡೆಗೊಂಡು 28 ದಿನಗಳ ನಂತರ ಪ್ಲಾಸ್ಮಾ ದಾನಿಗಳಾಗಬಹುದು.

ಚಿಕಿತ್ಸೆ ಪಡೆಯುತ್ತಿರುವ ಕೋವಿಡ್– 19 ರೋಗಿಗಳ ರಕ್ತದ ಗುಂಪಿನ ಬಗ್ಗೆ ಮಾಹಿತಿಯನ್ನು ಈ ಆ್ಯಪ್‌ನಲ್ಲಿ ಅಳವಡಿಸಲಾಗುತ್ತದೆ. ಇದರಿಂದ ಅಗತ್ಯ ಇರುವವರಿಗೆ ಯಾವುದೇ ತೊಡಕಿಲ್ಲದೇಪ್ಲಾಸ್ಮಾ ಚಿಕಿತ್ಸೆ ಲಭ್ಯವಾಗುತ್ತದೆ ಎಂದು ಏಮ್ಸ್‌ನ ಸಂಶೋಧನಾ ವಿಭಾಗದ ಅಧ್ಯಕ್ಷ ಡಾ. ಆದರ್ಶ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.

ಪ್ಲಾಸ್ಮಾ ಕೊರತೆಯ ನಡುವೆ ಇದೊಂದು ಒಳ್ಳೆಯ ಬೆಳವಣಿಗೆ. ಡಾ. ಅಭಿನವ್ ಸಿಂಗ್ ವರ್ಮಾ ನೇತೃತ್ವದಲ್ಲಿ ಐಐಟಿ ದೆಹಲಿ ವಿದ್ಯಾರ್ಥಿಗಳು ಇದನ್ನು ಅಭಿವೃದ್ಧಿಪಡಿಸಿದ್ದಾರೆ. ಸದ್ಯಕ್ಕೆ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಮಟ್ಟಿಗೆ ಈ ಆ್ಯಪ್ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

70 ಪ್ಲಾಸ್ಮಾ ದಾನಿಗಳು ಈ ಅಪ್ಲಿಕೇಷನ್‌ನಲ್ಲಿ ಹೆಸರು ನೋಂದಾಯಿಸಿದ್ದಾರೆ. ಏಮ್ಸ್‌ನ ರಕ್ತನಿಧಿಯ ಕಚೇರಿಯೊಂದಿಗೂ ಈ ಮಾಹಿತಿ ಹಂಚಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಅಗತ್ಯ ಇರುವ ರೋಗಿಗಳಿಗೆ ಪ್ಲಾಸ್ಮಾ ದಾನಿಗಳ ನೆರವು ಸಿಗಲಿದೆ ಎಂದು ಡಾ. ವರ್ಮಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.