ಗೂಗಲ್ ಕ್ರೋಮ್ ಬ್ರೌಸರ್‌ನಲ್ಲಿ ಕಾಣಿಸಿಕೊಂಡಿರುವ ಬಗ್ ಒಂದರ ಕುರಿತು ಭಾರತೀಯ ಕಂಪ್ಯೂಟರ್ ತುರ್ತು ಪ್ರತಿಸ್ಪಂದನಾ ತಂಡ (ಸರ್ಟ್–ಇನ್) ಬಳಕೆದಾರರಿಗೆ ಎಚ್ಚರಿಕೆ ನೀಡಿದೆ.
ಗೂಗಲ್ ಕ್ರೋಮ್ ಬ್ರೌಸರ್‌ನ ಬಗ್‌ನಿಂದಾಗಿ ಹ್ಯಾಕರ್‌ಗಳು, ರಿಮೋಟ್ ಮೂಲಕ ಸಿಸ್ಟಂ ವ್ಯವಸ್ಥೆಯನ್ನು ಹಾಳುಗೆಡವುವ ಇಲ್ಲವೇ ತಮ್ಮ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಸರ್ಟ್–ಇನ್ ಎಚ್ಚರಿಸಿದೆ.
ಕ್ರೋಮ್‌ನಲ್ಲಿರುವ ಲೋಪವನ್ನು ಹ್ಯಾಕರ್ಸ್ ತಿಳಿದುಕೊಂಡರೆ, ಬಳಕೆದಾರರ ಕಂಪ್ಯೂಟರ್ ಅನ್ನು ಪ್ರವೇಶಿಸಿ, ಅದರ ಕೋಡ್ ಮತ್ತು ಡಾಸ್ ವ್ಯವಸ್ಥೆಯನ್ನು ತಮ್ಮ ನಿಯಂತ್ರಣಕ್ಕೆ ಪಡೆದುಕೊಳ್ಳಬಹುದು. ಹೀಗಾಗಿ ಸೂಕ್ತ ಭದ್ರತಾ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದೆ.
ಈ ಹಿಂದೆಯೂ ಗೂಗಲ್ ಕ್ರೋಮ್ ಬ್ರೌಸರ್‌ನಲ್ಲಿನ ಬಗ್ ಒಂದರ ಕುರಿತು ಸರ್ಟ್–ಇನ್ ಬಳಕೆದಾರರಿಗೆ ಎಚ್ಚರಿಕೆ ನೀಡಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.