ಬುಧವಾರ, ಸೆಪ್ಟೆಂಬರ್ 22, 2021
23 °C

ಎಲೊನ್ ಮಸ್ಕ್ ಸ್ಟಾರ್‌ಲಿಂಕ್ ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್ ಸೇವೆ ಶೀಘ್ರ ಆರಂಭ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

SpaceX founder and Tesla CEO Elon Musk speaks on a screen during the Mobile World Congress (MWC) in Barcelona, Spain, June 29, 2021. (REUTERS)

ಬೆಂಗಳೂರು: ಟೆಸ್ಲಾ ಖ್ಯಾತಿಯ ಎಲೊನ್ ಮಸ್ಕ್ ಒಡೆತನದ ಸ್ಟಾರ್‌ಲಿಂಕ್ ಬ್ರಾಡ್‌ಬ್ಯಾಂಡ್ ಸೇವೆ ಶೀಘ್ರದಲ್ಲೇ ಜಾಗತಿಕವಾಗಿ ಬಳಕೆದಾರರಿಗೆ ಲಭ್ಯವಾಗಲಿದೆ.

ಸ್ಪೇಸ್ ಎಕ್ಸ್‌ಪ್ಲೋರೇಶನ್ ಟೆಕ್ನಾಲಜೀಸ್ ಕಾರ್ಪೊರೇಶನ್ ಈಗಾಗಲೇ 1,500ಕ್ಕೂ ಅಧಿಕ ಸ್ಟಾರ್‌ಲಿಂಕ್ ಸರಣಿಯ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದೆ.

ಆಗಸ್ಟ್ ತಿಂಗಳಿನಲ್ಲಿ ಜಗತ್ತಿನ ವಿವಿಧ ಭಾಗಗಳಲ್ಲಿ ಸ್ಟಾರ್‌ಲಿಂಕ್ ಬ್ರಾಡ್‌ಬ್ಯಾಂಡ್ ಇಂಟರ್‌ನೆಟ್ ಸೇವೆ ದೊರೆಯಲಿದೆ.

ಮಂಗಳವಾರ ನಡೆದ ಮೊಬೈಲ್ ವರ್ಲ್ಡ್ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಎಲೊನ್ ಮಸ್ಕ್, ಜಾಗತಿಕವಾಗಿ ಬ್ರಾಡ್‌ಬ್ಯಾಂಡ್ ಸೇವೆ ನೀಡಲು ಸಿದ್ಧತೆ ನಡೆದಿದೆ. ಉತ್ತಮ ಸೇವೆಯ ಜತೆಗೆ ಗರಿಷ್ಠ ಸಂಖ್ಯೆಯ ಬಳಕೆದಾರರನ್ನು ಹೊಂದುವ ಗುರಿ ಇದೆ. ಅದಕ್ಕಾಗಿ ಮತ್ತಷ್ಟು ಹೂಡಿಕೆ ಮಾಡಲಾಗುತ್ತದೆ ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು