ಸೋಮವಾರ, ಅಕ್ಟೋಬರ್ 26, 2020
28 °C

ಹೊಸ ವಿಜ್ಞಾನ ನೀತಿ: ಮಹಿಳಾ ಸಿಬ್ಬಂದಿಗೆ ಪ್ರೋತ್ಸಾಹ ಆಧರಿಸಿ ಸಂಸ್ಥೆಗೆ ರೇಟಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

Woman tech

ನವದೆಹಲಿ: ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳು ತಮ್ಮಲ್ಲಿರುವ ಮಹಿಳಾ ಸಿಬ್ಬಂದಿಗೆ ಎಷ್ಟರ ಮಟ್ಟಿಗೆ ಪ್ರೋತ್ಸಾಹ ನೀಡುತ್ತಿವೆ ಎಂಬುದರ ಆಧಾರದ ಮೇಲೆ ಅವುಗಳಿಗೆ ರೇಟಿಂಗ್‌ ನೀಡಲು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿಎಸ್‌ಟಿ) ನಿರ್ಧರಿಸಿದೆ.

ಹೊಸ ವಿಜ್ಞಾನ, ತಂತ್ರಜ್ಞಾನ ಮತ್ತು ಆವಿಷ್ಕಾರ ನೀತಿಯಡಿ (ಎಸ್‌ಟಿಐಪಿ) ಸಂಸ್ಥೆಗಳಿಗೆ ಅಂಕಗಳನ್ನು (ರೇಟಿಂಗ್‌) ನೀಡಲಾಗುವುದು ಎಂದು ಇಲಾಖೆಯ ಕಾರ್ಯದರ್ಶಿ ಅಶುತೋಷ್‌ ಶರ್ಮಾ ಹೇಳಿದ್ದಾರೆ.

ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನೆ ಕ್ಷೇತ್ರದಲ್ಲಿ ಮಹಿಳೆಯರ ಒಳಗೊಳ್ಳುವಿಕೆ, ವೈವಿಧ್ಯಕ್ಕೆ ಈ ನೀತಿಯಲ್ಲಿ ಒತ್ತು ನೀಡಲಾಗಿದೆ. ಜತೆಗೆ ರೇಟಿಂಗ್‌ ನೀಡುವಾಗ ಭಾಷೆ ಮತ್ತು ಭೌಗೋಳಿಕ ಪ್ರದೇಶವನ್ನು ಸಹ ಮಾನದಂಡವಾಗಿ ಪರಿಗಣಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

‘ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್‌ ಹಾಗೂ ಗಣಿತ ಕ್ಷೇತ್ರಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಕಡಿಮೆ ಇದೆ. ದೇಶದ ಪ್ರತಿಷ್ಠಿತ ಎಂಜಿನಿಯರಿಂಗ್‌ ಇನ್ಸ್‌ಟಿಟ್ಯೂಟ್‌ಗಳಲ್ಲಿ ಪ್ರವೇಶ ಪಡೆಯುವ ಮಹಿಳೆಯರ ಸಂಖ್ಯೆ ಶೇ 12ಕ್ಕಿಂತಲೂ ಕಡಿಮೆ ಇದೆ’ ಎಂದು ತಿಳಿಸಿದ್ದಾರೆ.

‘ಈ ಕ್ಷೇತ್ರಗಳಲ್ಲಿ ಅಧ್ಯಯನ, ಸಂಶೋಧನೆ ಕೈಗೊಳ್ಳುವ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಸಬೇಕು. ಮಹಿಳಾ ವಿಜ್ಞಾನಿಗಳು, ತಂತ್ರಜ್ಞರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ‘ನಾಲೆಜ್‌ ಇನ್ವಾಲ್ಮೆಂಟ್‌ ಇನ್‌ ರಿಸರ್ಚ್ ಅಡ್ವಾನ್ಸ್‌ಮೆಂಟ್ ಥ್ರೂ ನರ್ಚರಿಂಗ್‌’ (ಕಿರನ್) ಎಂಬ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ’ ಎಂದೂ ಅವರು ಹೇಳಿದ್ದಾರೆ.

ಎಸ್‌ಟಿಐಪಿ–2020 ಹೊಸ ನೀತಿ ಇದೇ ಡಿಸೆಂಬರ್‌ನಲ್ಲಿ ಜಾರಿಯಾಗಲಿದ್ದು, ಇದರ ಅಡಿಯಲ್ಲಿ ಸರ್ಕಾರಿ ಮತ್ತು ಖಾಸಗಿ ವಿಜ್ಞಾನ, ತಂತ್ರಜ್ಞಾನ ಸಂಸ್ಥೆಗಳಿಗೆ ರೇಟಿಂಗ್ ನೀಡಲಾಗುತ್ತದೆ.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು