ನವದೆಹಲಿ: ‘ಆಗಸ್ಟ್‌ನಲ್ಲಿ ತನ್ನ ಷರತ್ತು ಹಾಗೂ ನಿಯಮಗಳನ್ನು ಉಲ್ಲಂಘಿಸಿದ ಭಾರತೀಯರ ಸುಮಾರು 20 ಲಕ್ಷ ಖಾತೆಗಳನ್ನು ನಿಷೇಧಿಸಲಾಗಿದೆ‘ ಎಂದು ಫೇಸ್‌ಬುಕ್ ಒಡೆತನದ ವಾಟ್ಸ್‌ಆ್ಯಪ್ ಕಂಪನಿ ಶನಿವಾರ ತಿಳಿಸಿದೆ.
ಮಾಸಿಕ ದೂರು ಸ್ವೀಕಾರ ವರದಿಯಲ್ಲಿ ಈ ಅಂಶ ಬೆಳಕಿಗೆ ಬಂದಿದೆ. 20,70,000 ಖಾತೆಗಳನ್ನು ನಿಷೇಧ ಮಾಡಲಾಗಿದೆ ಅಥವಾ ತಡೆ ಹಿಡಿಯಲಾಗಿದೆ ಎಂದು ವಾಟ್ಸ್‌ಆ್ಯಪ್ ತಿಳಿಸಿದೆ.
ಅಲ್ಲದೇ ಇದೇ ವೇಳೆ 420 ಕುಂದು ಕೊರತೆ ದೂರುಗಳನ್ನು ಆಗಸ್ಟ್ ತಿಂಗಳಲ್ಲಿ ವಾಟ್ಸ್‌ಆ್ಯಪ್ ಸ್ವೀಕರಿಸಿದೆ ಎಂಬುದು ತಿಳಿದು ಬಂದಿದೆ.
ಜೂನ್ 16 ರಿಂದ ಜುಲೈ 31 ರವರೆಗೆ 30 ಲಕ್ಷ ಭಾರತೀಯರ ವಾಟ್ಸ್‌ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದ್ದು, ಒಟ್ಟಾರೆಯಾಗಿ ದುರುಪಯೋಗ ತಡೆಯಲು ಹಾಗೂ ದೂರು ಸ್ವೀಕಾರದ ಅನುಸಾರವಾಗಿ ಜಗತ್ತಿನಲ್ಲಿ ಪ್ರತಿ ತಿಂಗಳು ಸರಾಸರಿ 80 ಲಕ್ಷಖಾತೆಗಳನ್ನು ವಾಟ್ಸ್‌ಆ್ಯಪ್ ನಿಷೇಧಿಸುತ್ತಿದೆ.
ತನ್ನ ಮೇಸೆಜಿಂಗ್ ವೇದಿಕೆಯಲ್ಲಿ ಷರತ್ತು ಹಾಗೂ ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಹಾಗೂ ದುರುಪಯೋಗ ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅದು ತಿಳಿಸಿದೆ.
ಸದ್ಯ ಈ ಅಕೌಂಟ್‌ಗಳನ್ನು ಪುನರ್‌ಸ್ಥಾಪಿಸಿಕೊಳ್ಳುವ ಅವಕಾಶ ಬಳಕೆದಾರನಿಗೆ ಇಲ್ಲವಾದರೂ ಶೀಘ್ರದಲ್ಲಿಯೇ ಈ ಆಯ್ಕೆ ಕೂಡ ವಾಟ್ಸ್‌ಆ್ಯಪ್‌ನಲ್ಲಿ ಇರಲಿದೆ. ಆದರೆ. ಅದಕ್ಕೆ ಕಠಿಣ ನಿಯಮಗಳು ಇರಲಿವೆ ಎಂದು ಇತ್ತೀಚಿನ ವರದಿಯಲ್ಲಿ ತಿಳಿದು ಬಂದಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.