ಡೊನಾಲ್ಡ್ ಟ್ರಂಪ್ ಟ್ವಿಟರ್ ಖಾತೆ 12 ತಾಸು ಕಾಲ ಅಮಾನತು

ವಾಷಿಂಗ್ಟನ್: ಅಮೆರಿಕ ಕ್ಯಾಪಿಟಲ್ಗೆ ತಮ್ಮ ಬೆಂಬಲಿಗರು ನುಗ್ಗಿ ಹಿಂಸಾಚಾರ ನಡೆಸಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸಂಬಂಧಿಸಿದಂತೆ ಪದೇ ಪದೇ ಸುಳ್ಳು ಆರೋಪಗಳನ್ನು ಮಾಡಿರುವ ಡೊನಾಲ್ಡ್ ಟ್ರಂಪ್ ಅವರ ಟ್ವಿಟರ್ ಖಾತೆಯನ್ನು ಬುಧವಾರದಂದು 12 ತಾಸು ಕಾಲ ಅಮಾನತಿನಲ್ಲಿಡಲಾಗಿದೆ.
ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಎಲೆಕ್ಟೋರಲ್ ಕಾಲೇಜ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದ ನೂರಾರು ಟ್ರಂಪ್ ಬೆಂಬಲಿಗರು ಪೊಲೀಸರ ವಿರುದ್ಧ ಘರ್ಷಣೆಗಿಳಿದು ಹಿಂಸಾಚಾರದಲ್ಲಿ ಭಾಗಿಯಾದರು.
ಘಟನೆ ಸಂಬಂಧಿಸಿದಂತೆ ಡೊನಾಲ್ಡ್ ಟ್ರಂಪ್, ಟ್ವಿಟರ್ನಲ್ಲಿ ಪದೇ ಪದೇ ಸುಳ್ಳು ಆರೋಪಗಳನ್ನು ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಡೊನಾಲ್ಡ್ ಟ್ರಂಪ್ ಟ್ವಿಟರ್ ಖಾತೆ ಅಮಾನತಿನಲ್ಲಿಡಲಾಗಿದ್ದು, ಭವಿಷ್ಯದಲ್ಲಿ ನಿಯಮ ಉಲ್ಲಂಘಿದ್ದಲ್ಲಿ ಶಾಶ್ವತ ಅಮಾನತಿಗೆ ಕಾರಣವಾಗುತ್ತದೆ ಎಂದು ಟ್ವಿಟರ್ ಎಚ್ಚರಿಸಿದೆ.
ಇದನ್ನೂ ಓದಿ: ಅಮೆರಿಕ ಕ್ಯಾಪಿಟಲ್ಗೆ ನುಗ್ಗಿದ ಡೊನಾಲ್ಡ್ ಟ್ರಂಪ್ ಬೆಂಬಲಿಗರಿಂದ ಸಂಘರ್ಷ
ಡೊನಾಲ್ಡ್ ಟ್ರಂಪ್ ಪೋಸ್ಟ್ ಮಾಡಿರುವ ವಿಡಿಯೊವನ್ನು ಫೇಸ್ಬುಕ್ ಹಾಗೂ ಯೂಟ್ಯೂಬ್ ಸಹ ತೆಗೆದು ಹಾಕಿದೆ. ತಮ್ಮ ಬೆಂಬಲಿಗರಲ್ಲಿ ಹಿಂಸಾಚಾರವನ್ನು ನಿಲ್ಲಿಸಿ ಮನೆಗೆ ಹೋಗುವಂತೆ ಮನವಿ ಮಾಡುತ್ತಿರುವ ಡೊನಾಲ್ಡ್ ಟ್ರಂಪ್, ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಮೋಸ ನಡೆದಿದೆ ಎಂದು ಸುಳ್ಳು ಸುದ್ದಿಗಳನ್ನು ಹಬ್ಬಿದ್ದರು.
do you see the issue? #USCapitol #blm pic.twitter.com/wxG7EC95vL
— lyds ❀ (@thinknboutuu) January 6, 2021
ಈ ಬಗ್ಗೆ ಹೇಳಿಕೆ ಕೊಟ್ಟಿರುವ ಫೇಸ್ಬುಕ್ ಸಮಗ್ರತೆಯ ಉಪಾಧ್ಯಕ್ಷ ಗಯ್ ರಾಸೆನ್, ಡೊನಾಲ್ಡ್ ಟ್ರಂಪ್ ಹೇಳಿಕೆಯು ಹಿಂಸಾಚಾರದ ಅಪಾಯವನ್ನು ಕಡಿಮೆ ಮಾಡುವ ಬದಲು ಮತ್ತಷ್ಟು ಹುರಿದುಂಬಿಸುತ್ತಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.