ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃಂಗೇರಿಯ ಶಾರದಾಂಬೆ ದರ್ಶನ ಪಡೆದ ‘ರಾಹುಲ್‌’

Last Updated 21 ಮಾರ್ಚ್ 2018, 8:59 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಎರಡು ದಿನಗಳ ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಬುಧವಾರ ಶೃಂಗೇರಿಯ ಶಾರದಾಂಬೆ ದೇಗುಲದಲ್ಲಿ ಪೂಜೆ ಸಲ್ಲಿಸಿದರು.

ಶೃಂಗೇರಿಯ ತೋರಣ ಗಣಪತಿಗೆ 108 ಈಡುಗಾಯಿ ಸೇವೆ ಮಾಡಿದ ರಾಹುಲ್, ಬಳಿಕ ನರಸಿಂಹವನದಲ್ಲಿರುವ ನಂತರ ಶಾರದಾ ಪೀಠದಲ್ಲಿ ಭಾರತೀತೀರ್ಥ ಸ್ವಾಮೀಜಿ ಭೇಟಿ ಮಾತುಕತೆ ನಡೆಸಿದರು.

ಶೃಂಗೇರಿ ಮಂದಿರದ ಪಕ್ಕದಲ್ಲಿರುವ ತುಂಗಾ ನದಿಯ ಮೀನುಗಳಿಗೆ ಆಹಾರ ಹಾಕಿ ರಾಹುಲ್ ಗಮನ ಸೆಳೆದರು.

ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್‌ ಉಸ್ತುವರಿ ಕೆ.ಸಿ. ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ, ಮಲ್ಲಿಕಾರ್ಜುನ ಖರ್ಗೆ, ಡಿ. ಕೆ . ಶಿವಕುಮಾರ್ ಸೇರಿದಂತೆ ಹಲವು ನಾಯಕರು ಇದ್ದರು.

ಈ ಹಿಂದೆ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಅವರು ಶಾರದಾ ಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT