ಸೋಮವಾರ, ಆಗಸ್ಟ್ 8, 2022
21 °C

ಮುಂಬೈ: ಏಕಾಏಕಿ ಗುಂಡಿಯೊಳಗೆ ಬಿದ್ದ ಕಾರು; ದೃಶ್ಯ ವೈರಲ್

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಮುಂಬೈ: ವಾಣಿಜ್ಯ ನಗರಿ ಮುಂಬೈನಲ್ಲಿ ಭಾರಿ ಮಳೆಯಾಗಿದ್ದು, ನಿಲ್ಲಿಸಿದ್ದ ಕಾರೊಂದು ಏಕಾಏಕಿ ಗುಂಡಿಯೊಳಗೆ ಬೀಳುವ ದೃಶ್ಯವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಮುಂಬೈನ ಘಟ್ಕೋಪಾರ್ ಪ್ರದೇಶದ ವಸತಿ ಸಮುಚ್ಚಯದ ಪಾರ್ಕಿಂಗ್ ಸ್ಥಳದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: 

ಈ ಕುರಿತು ಮಾಹಿತಿ ನೀಡಿರುವ ಟ್ರಾಫಿಕ್ ಪೊಲೀಸರು, 'ಈ ಪ್ರದೇಶದಲ್ಲಿ ಗುಂಡಿಯಿದ್ದು, ಕೆಲವರು ಅದನ್ನು ಕಾಂಕ್ರೀಟ್ ಹಾಕಿ ಮುಚ್ಚಿದ್ದರು. ಬಳಿಕ ಅದರ ಮೇಲೆ ಕಾರನ್ನು ನಿಲ್ಲಿಸಲು ಪ್ರಾರಂಭಿಸಿದರು. ಈಗ ಸುರಿದ ಭಾರಿ ಮಳೆಯಿಂದಾಗಿ ಭೂ ಕುಸಿತ ಉಂಟಾಗಿ ಮತ್ತೆ ಗುಂಡಿ ಸೃಷ್ಟಿಯಾಗಿದೆ. ಇದರೊಳಗೆ ಕಾರು ಬಿದ್ದಿದೆ' ಎಂದಿದ್ದಾರೆ.

 

 

ಘಟನೆ ವೇಳೆ ಕಾರಿನಲ್ಲಿ ಯಾರೂ ಇರಲಿಲ್ಲ. ಇದರಿಂದಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ.

ಮುಂಬೈಗೆ ಮುಂಗಾರು ಪ್ರವೇಶವಾಗಿದ್ದು, ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ.

ಪ್ರಸ್ತುತ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ಹೇಗೆ ಸಂಭವಿಸಿತು ಎಂದು ಹಲವರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು