ಭಾನುವಾರ, ಜುಲೈ 3, 2022
24 °C

ಅರುಣಾಚಲ ಪ್ರದೇಶ; ವಾಹನಗಳು ಸಂಚರಿಸುತ್ತಿರುವಾಗಲೇ ಹೆದ್ದಾರಿ ಕುಸಿತ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಇತ್ತೀಚೆಗೆ ಭಾರಿ ಮಳೆ ಸುರಿದಿತ್ತು. ಈ ಮಧ್ಯೆ ವಾಹನ ಸಂಚರಿಸುತ್ತಿರುವಾಗಲೇ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದಿರುವ ಭಯಾನಕ ಘಟನೆ ವರದಿಯಾಗಿದೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇಟಾನಗರದ ಗಾಂಧಿ ಪಾರ್ಕ್ ಡಿ-ಸೆಕ್ಟರ್ ಬಳಿ ರಾಷ್ಟ್ರೀಯ ಹೆದ್ದಾರಿ-415ರ ಒಂದು ಭಾಗ ಸೇರಿದಂತೆ ರಸ್ತೆಯ ತಡೆಗೋಡೆ ಸಂಪೂರ್ಣವಾಗಿ ಕುಸಿಯುತ್ತದೆ.

ಇದನ್ನೂ ಓದಿ: 

ಹೆದ್ದಾರಿಯ ಇನ್ನೊಂದು ಭಾಗದಲ್ಲಿ ವಾಹನಗಳು ಸಂಚರಿಸುತ್ತಿದ್ದವು. ಆದರೆ ಯಾವುದೇ ಅಪಾಯ ಎದುರಾಗಿಲ್ಲ. ಈ ವಿಡಿಯೊ ಕ್ಯಾಮೆರಾ ಕಣ್ಣುಗಳಲ್ಲಿ ಸೆರೆಯಾಗಿವೆ.

 

 

 

ನಹರ್ಲಾಗುನ್ ಮತ್ತು ಇಟಾನಗರವನ್ನು ಸಂಪರ್ಕಿಸುವ ಹೆದ್ದಾರಿ ನಿರ್ಮಾಣ ಕಾರ್ಯವು ಇತ್ತೀಚೆಗಷ್ಟೇ ಪೂರ್ಣಗೊಂಡಿತ್ತು. ಈ ಘಟನೆ ಬಳಿಕ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಲುಗಡೆಗೊಳಿಸಲಾಗಿತ್ತು.

 

ಕಳಪೆ ಗಾಮಗಾರಿ ಬಗ್ಗೆಯೂ ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದ್ದು, ತನಿಖೆಗೆ ಆಗ್ರಹಿಸಿದ್ದಾರೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಇಟಾನಗರ ಹಾಗೂ ಅನೇಕ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು