ಶುಕ್ರವಾರ, ಜೂನ್ 5, 2020
27 °C

ಕೋವಿಡ್‌ನಿಂದ ಚೇತರಿಸಿದ 6ರ ಬಾಲಕನ ಬಾಯಲ್ಲಿ 'ಮೋದಿಯನ್ನು ಕೊಲ್ಲುತ್ತೇವೆ' ಮಾತು!

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Viral video

ನವದೆಹಲಿ: ಕುಟುಂಬವೊಂದರ ಸದಸ್ಯರು ಕೊರೊನಾ ಸೋಂಕಿನಿಂದ ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವ ಸಂದರ್ಭದಲ್ಲಿ ಮಗುವೊಂದು ‘ಹಮ್ ಮೋದಿ ಕೊ ಮಾರೆಂಗೇ’ ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಿಜೆಪಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಸಹ ಆ ವಿಡಿಯೊವನ್ನು ಟ್ವೀಟ್ ಮಾಡಿದ್ದು, ಪುಟ್ಟ ಮಗುವಿನ ಮುಗ್ಧ ಮನಸ್ಸಿನಲ್ಲಿ ವಿಷ ತುಂಬಿದವರು ಯಾರು ಎಂದು ಪ್ರಶ್ನಿಸಿದ್ದಾರೆ.

‘ನಾವು ಮೋದಿಯನ್ನು ಕೊಲ್ಲುತ್ತೇವೆ’. ಈ ಮಾತುಗಳು ಮೇ 13ರಂದು ತನ್ನ ಕುಟುಂಬ ಮತ್ತು ಸಂಬಂಧಿಕರೊಂದಿಗೆ ಕೊರೊನಾ ಯುದ್ಧದಲ್ಲಿ ಜಯಗಳಿಸಿದ ನಂತರ ಇಂದೋರ್‌ನ ಇಂಡೆಕ್ಸ್ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಿಂದ ಮನೆಗೆ ಹಿಂದಿರುಗುತ್ತಿದ್ದ 6 ವರ್ಷದ ಮಗುವಿನ ಬಾಯಿಂದ ಬಂದಿರುವುದು. ಈ ಸಣ್ಣ ಮುಗ್ಧ ಮಗುವಿನ ಮನಸ್ಸಿನಲ್ಲಿ ಈ ವಿಷವನ್ನು ತುಂಬಿದವರು ಯಾರು?’ ಎಂದು ಟ್ವೀಟ್‌ನಲ್ಲಿ ಅವರು ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು