ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

68ನೇ ವಯಸ್ಸಿನಲ್ಲಿ ಮೂರನೇ ಮದುವೆಯಾದ ಖ್ಯಾತ ವಕೀಲ ಹರೀಶ್‌ ಸಾಳ್ವೆ

Published 4 ಸೆಪ್ಟೆಂಬರ್ 2023, 5:47 IST
Last Updated 4 ಸೆಪ್ಟೆಂಬರ್ 2023, 5:47 IST
ಅಕ್ಷರ ಗಾತ್ರ

ಮುಂಬೈ: ಭಾರತದ ಮಾಜಿ ಸಾಲಿಸಿಟರ್ ಜನರಲ್, ಖ್ಯಾತ ವಕೀಲ ಹರೀಶ್‌ ಸಾಳ್ವೆ 68ನೇ ವಯಸ್ಸಿನಲ್ಲಿ ಮೂರನೇ ಮದುವೆಯಾಗಿದ್ದಾರೆ.  ಟ್ರಿನಾ ಎನ್ನುವವರೊಂದಿಗೆ ಸಾಳ್ವೆ ಲಂಡನ್‌ನಲ್ಲಿ ಮದುವೆಯಾಗಿದ್ದಾರೆ. 

ಸಾಳ್ವೆ ಅವರ ಮದುವೆಗೆ ನೀತಾ ಅಂಬಾನಿ, ಗೋಪಿ ಹಿಂದುಜಾ ಲಲಿತ್‌ ಮೋದಿ, ಉಜ್ವಲ್‌ ರಾವತ್‌ ಸೇರಿ ಹಲವರು ಭಾಗಿಯಾಗಿದ್ದರು ಎಂದು ವರದಿ ತಿಳಿಸಿದೆ. 

ಇವರ ಮದುವೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಟ್ರಿನಾ ಅವರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

ಸಾಳ್ವೆ ಅವರು 1982ರಲ್ಲಿ ಮೀನಾಕ್ಷಿ ಅವರನ್ನು ಮದುವೆಯಾಗಿ 2020ರಲ್ಲಿ ವಿಚ್ಛೇದನ ನೀಡಿದ್ದರು. 2020ರಲ್ಲಿ ಕಾರೋಲಿನ್‌ ಬ್ರೊಸಾರ್ಡ್‌ ಎನ್ನುವವರನ್ನು ಮದುವೆಯಾಗಿದ್ದರು.

ಕುಲಭೂಷಣ್‌ ಜಾಧವ್‌ ಪ್ರಕರಣ ಸೇರಿ ಹಲವು ಉನ್ನತ ಮಟ್ಟದ ಪ್ರಕರಣಗಳಲ್ಲಿ ಸಾಳ್ವೆ ವಕೀಲರಾಗಿದ್ದರು. ಜಾಧವ್‌ ಪ್ರಕರಣದಲ್ಲಿ ₹1 ಶುಲ್ಕ ಹಣ ಪಡೆದು ಸುದ್ದಿಯಾಗಿದ್ದರು.

2015ರಲ್ಲಿ ಹರಿಶ್‌ ಸಾಳ್ವೆ ಪದ್ಮ ಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT