ಭಾನುವಾರ, ಜುಲೈ 3, 2022
23 °C

ಕ್ಯಾಮೆರಾಗೆ ಪೋಸ್ ನೀಡಿದ ಅವಳಿ ಪೊಲೀಸ್ ಅಧಿಕಾರಿಗಳು: ‘ಸಿಂಗಂ’ ಎಂದ ನೆಟ್ಟಿಗರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ತಮಿಳುನಾಡಿನ ಚೆಂಗಲ್‌ಪೇಟೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಪಿ.ಅರವಿಂದನ್ ಅವರು ಸಹೋದರನೊಂದಿಗೆ ಕಾಣಿಸಿಕೊಂಡಿರುವ ಫೋಟೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. 

ಸದ್ಯ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, 11 ಸಾವಿರಕ್ಕೂ ಹೆಚ್ಚು ಮಂದಿ ಇಷ್ಟಪಟ್ಟಿದ್ದಾರೆ. ಇಬ್ಬರಲ್ಲಿ ಯಾರು ದೊಡ್ಡವರು, ಯಾರು ಚಿಕ್ಕವರು, ಇಬ್ಬರ ನಡುವಿನ ವ್ಯತ್ಯಾಸ ಕಂಡು ಹಿಡಿಯುವ ಕುರಿತು ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ. 

‘ನನ್ನ ಸಹೋದರ ಎಸಿಪಿ ಅಭಿನಂದನ್‌ ಜೊತೆ ನಾನು. ತಮಿಳುನಾಡು ಪೊಲೀಸ್ ದೆಹಲಿ ಪೊಲೀಸರನ್ನು ಭೇಟಿಯಾದ ಸಮಯ’ ಎಂದು ಬರೆದುಕೊಂಡಿದ್ದಾರೆ. ಈ ಫೋಟೊ ನೋಡಿರುವ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೆಲವರು ನಟ ಸೂರ್ಯ ಅಭಿನಯದ ‘ಸಿಂಗಂ’ ಸಿನಿಮಾ ನೆನಪಾಗುತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ. 

ಓದಿ...  ಸೆ.30ಕ್ಕೆ ಮಣಿರತ್ನಂ ನಿರ್ದೇಶನದ ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಬಿಡುಗಡೆ

‘ಇದು ತುಂಬಾ ಅತಿವಾಸ್ತವಿಕವಾಗಿದೆ’ ಎಂದು ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಸಹೋದರರಿಬ್ಬರು ‘ಪರಸ್ಪರ ತದ್ರೂಪಿಗಳು’ ಎಂದು ಕೆಲವರು ಕಾಮೆಂಟಿಸಿದ್ದಾರೆ. 

ಐಪಿಎಸ್ ಅಧಿಕಾರಿ ಸೆಲ್ವನ್ ನಾಗರತಿನಂ ಫೇಸ್‌ಬುಕ್‌ನಲ್ಲಿ ‘ಇಬ್ಬರ ಅಭಿವ್ಯಕ್ತಿಯೂ ಒಂದೇ. ಅದ್ಭುತ ಕ್ಲಿಕ್!’ ಎಂದು ಪ್ರತಿಕ್ರಿಯಿಸಿದ್ದಾರೆ. 

ಅರವಿಂದನ್ ಅವರು ಕಂಪ್ಯೂಟರ್ ಸೈನ್ಸ್ ಪದವೀಧರರಾಗಿದ್ದಾರೆ. 2010 ರಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಪಿಎಸ್‌ ಅಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಆರಂಭದಲ್ಲಿ ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. 

ಇತ್ತ ಅಭಿನಂದನ್ ದೆಹಲಿ ಪೊಲೀಸ್ ಇಲಾಖೆಯಲ್ಲಿ ಟ್ರೈನಿ ಎಸಿಪಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಓದಿ... ವಿಕ್ರಾಂತ್ ರೋಣ: ಇಂಗ್ಲಿಷ್‌ ಡಬ್ಬಿಂಗ್ ಪೂರ್ಣಗೊಳಿಸಿದ ಸುದೀಪ್; ಭಂಡಾರಿ ಮಾಹಿತಿ 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು