ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಂಜಾ ವ್ಯಸನಿ ಮಗನ ಮುಖಕ್ಕೆ ಖಾರದ ಪುಡಿ ಎರಚಿ ಥಳಿಸಿದ ತಾಯಿ: ವಿಡಿಯೊ ವೈರಲ್

Last Updated 5 ಏಪ್ರಿಲ್ 2022, 9:40 IST
ಅಕ್ಷರ ಗಾತ್ರ

ಹೈದರಾಬಾದ್: ಗಾಂಜಾ ವ್ಯಸನಿಯಾಗಿದ್ದ 15 ವರ್ಷದ ಮಗನನ್ನು ತಾಯಿಯೊಬ್ಬರು ವಿದ್ಯುತ್‌ ಕಂಬಕ್ಕೆ ಕಟ್ಟಿ, ಆತನ ಮುಖಕ್ಕೆ ಮೆಣಸಿನ ಪುಡಿ ಎರಚಿ ಹಿಗ್ಗಾಮುಗ್ಗ ಥಳಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಸೂರ್ಯಪೇಟೆಯಲ್ಲಿ ಈ ಘಟನೆ ಎಂದು ಹೇಳಲಾಗಿದೆ. ಮಗ ಗಾಂಜಾ ವ್ಯಸನಿ ಆಗಿರುವುದನ್ನು ನೋಡಿ ಸಹಿಸಲಾಗದೇ ಆತನ ಥಳಿಸಲಾಗಿದೆ ಎಂದು ವರದಿಯಾಗಿದೆ.

ಓದಿ... ಹೊಸ ಫೋಟೊ ಹಂಚಿಕೊಂಡ ಸಮಂತಾ: ಅಭಿಮಾನಿಗಳಿಂದ ಭಾರಿ ಮೆಚ್ಚುಗೆ

ಗಾಂಜಾ ಸೇವನೆ ನಿಲ್ಲಿಸುವುದಾಗಿ ಭರವಸೆ ನೀಡಿದ ನಂತರ ಆತನನ್ನು ಬಿಡಲಾಗಿದೆ. ಇದೀಗ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಿಗದಿತ ಸಮಯವನ್ನು ಮೀರಿ ಪಬ್‌ನಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪದ ಮೇರೆಗೆ ಟಾಲಿವುಡ್ ಮೆಗಾಸ್ಟಾರ್‌ ನಟ ಚಿರಂಜೀವಿ ಅವರ ತಮ್ಮ ನಾಗ ಬಾಬು ಪುತ್ರಿ ನಿಹಾರಿಕ ಕೊನಿಡೇಲಾ ಹಾಗೂ ಗಾಯಕ ರಾಹುಲ್ ಸಿಪ್ಲಿಗುಂಜ್ ಸೇರಿದಂತೆ 150 ಜನರನ್ನು ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT